ಭ್ರಷ್ಟರಿಗೆ ಲೋಕಾ ಶಾಕ್: ಬೆಳ್ಳಂ ಬೆಳಗ್ಗೆ ಮಂಗಳೂರು, ಮಂಡ್ಯ ಸೇರಿ ಕರ್ನಾಟಕದ ಹಲವೆಡೆ ದಾಳಿ!

Share to all

ಬೆಂಗಳೂರು:- ಭ್ರಷ್ಟ ಬೇಟೆ ಮುಂದುವರಿಸಿರುವ ಲೋಕಾಯುಕ್ತ ಅಧಿಕಾರಿಗಳು, ಬೆಂಗಳೂರು, ಮಂಗಳೂರು, ಮಂಡ್ಯ ಸೇರಿ ಕರ್ನಾಟಕದ 7 ಕಡೆ ದಾಳಿ ಮಾಡಿದೆ. ಬೆಂಗಳೂರಿನಲ್ಲಿ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಅಧಿಕಾರಿ ಎಂಸಿ ಕೃಷ್ಣವೇಣಿ ಮನೆ ಮೇಲೆ ದಾಳಿ ನಡೆದಿದೆ. ಸದ್ಯ ಕೃಷ್ಣವೇಣಿ ಮಂಗಳೂರಿಗೆ ವರ್ಗವಾಗಿದ್ದು, ಅಲ್ಲಿಯೂ ಅವರ ಮನೆ ಮೇಲೆ ದಾಳಿ ನಡೆದಿದೆ. ಅವರ ಸಂಬಂಧಿಕರ ಮನೆಗಳ ಮೇಲೂ ದಾಳಿ ನಡೆದಿದೆ.

ಬೆಂಗಳೂರಿನಲ್ಲಿ ಟೌನ್​​ ಮತ್ತು ಕಂಟ್ರಿ ಪ್ಲಾನಿಂಗ್ ನಿರ್ದೇಶಕ ತಿಪ್ಪೇಸ್ವಾಮಿ ಮನೆ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಬೆಂಗಳೂರಿನಲ್ಲಿ ಅಬಕಾರಿ ಇಲಾಖೆ ಎಸ್​​​ಪಿ ಮೋಹನ್ ಮನೆ ಮೇಲೆಯೂ ರೇಡ್​​​ ನಡೆದಿದೆ. ಕಾವೇರಿ ನೀರಾವರಿ ನಿಗಮ‌ ಎಂಡಿ ಮಹೇಶ್, ಸಂಬಂಧಿಕರ ಮನೆ ಮೇಲೆ ದಾಳಿ ಮಾಡಲಾಗಿದೆ. ಮಂಡ್ಯ ಜಿಲ್ಲೆ ಮಳವಳ್ಳಿಯಲ್ಲಿ ಮಹೇಶ್ ಮನೆ, ಸಂಬಂಧಿಕರ ಮನೆ ಮೇಲೆ ದಾಳಿ ನಡೆದಿದೆ.

ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಹಿರಿಯ ಅಧಿಕಾರಿ ಕೃಷ್ಣವೇಣಿ ಅವರ ಮಂಗಳೂರಿನ ವೆಲೆನ್ಸಿಯಾದ ಮನೆ ಹಾಗೂ ಕಚೇರಿಗೆ ದಾಳಿ ನಡೆಸಿರುವ ಅಧಿಕಾರಿಗಳು ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ. ಕೃಷ್ಣವೇಣಿ 2 ತಿಂಗಳ ಹಿಂದಷ್ಟೇ ವರ್ಗಾವಣೆ ಆಗಿ ಮಂಗಳೂರಿಗೆ ಬಂದಿದ್ದಾರೆ. ಇವರು ಈ ಹಿಂದೆ ಚಿಕ್ಕಬಳ್ಳಾಪುರದಲ್ಲಿ ಗಣಿ‌ ಇಲಾಖೆ ಅಧಿಕಾರಿಯಾಗಿದ್ದರು. ಚಿಕ್ಕಬಳ್ಳಾಪುರದಲ್ಲಿ ಕೃಷ್ಣವೇಣಿ ವಿರುದ್ಧ ದೂರು ದಾಖಲಾದ ಹಿನ್ನೆಲೆ ಈ ದಾಳಿ ನಡೆದಿದೆ. ಮಂಗಳೂರು ಲೋಕಾಯುಕ್ತ ಎಸ್​ಪಿ ನಟರಾಜ್ ನೇತೃತ್ವದಲ್ಲಿ ದಾಳಿ ನಡೆದಿದೆ.

ಮಂಗಳೂರಿನ ವೇಲೆನ್ಸಿಯಾ ಬಳಿಯ ಫ್ರೆಡ್ ರೋಸ್ ಎನ್ಕಲೇವ್ ಅಪಾರ್ಟ್​ಮೆಂಟ್​ಗೆ ಬೆಳಗ್ಗೆಯೇ ಮೂರು ವಾಹನಗಳಲ್ಲಿ ಆಗಮಿಸಿದ ಲೋಕಾ ಅಧಿಕಾರಿಗಳು ದಾಳಿ ನಡೆಸಿದರು. ಮಂಗಳೂರು ಹಾಗೂ ಚಿಕ್ಕಬಳ್ಳಾಪುರ ಲೋಕಾಯುಕ್ತ ಅಧಿಕಾರಿಗಳ ತಂಡ ಜಂಟಿಯಾಗಿ ಕಾರ್ಯಾಚರಣೆ ನಡೆಸಿದೆ. ಮಲ್ಲಿಕಟ್ಟೆ ಬಳಿಯ ಕಚೇರಿಗೂ ಲೋಕಾಯುಕ್ತ ಎಂಟ್ರಿಕೊಟ್ಟಿದೆ.

ಮಂಡ್ಯದಲ್ಲಿ ‌ಲೋಕಾಯುಕ್ತ ಎಸ್​ಪಿ ಸುರೇಶ್ ಬಾಬು ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಲಾಗಿದ್ದು, ಕಾವೇರಿ ನೀರಾವರಿ ನಿಗಮದ ಎಂಡಿ ಮಹೇಶ್ ಮನೆಗಳ ಮೇಲೆ ದಾಳಿ ಮಾಡಲಾಗಿದೆ.


Share to all

You May Also Like

More From Author