ಬೆಂಗಳೂರು: ಬೆಂಗಳೂರು, ಮಂಡ್ಯ, ಮಂಗಳೂರು ಸೇರಿದಂತೆ ಸೇರಿ ಕರ್ನಾಟಕದ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ದಾಳಿ ನಡೆಸುವ ಮೂಲಕ ಭ್ರಷ್ಟರ ವಿರುದ್ಡ ಲೋಕಾಯುಕ್ತ ಅಧಿಕಾರಿಗಳು ಸಮರ ಸಾರಿದ್ದಾರೆ. ಇತ್ತೀಚೆಗೆ ಅಬಕಾರಿ ಭ್ರಷ್ಟಾಚಾರದ ಬಗ್ಗೆ ದೂರು ಕೇಳಿಬಂದಿತ್ತು ಹಿನ್ನೆಲೆ ಅಬಕಾರಿ ಇಲಾಖೆ ಅಧಿಕಾರಿಗಳ ಮನೆಗಳ ಮೇಲೂ ದಾಳಿ ನಡೆಸಿರುವ ಲೋಕಾಯುಕ್ತ ಅಧಿಕಾರಿಗಳು. ನೀರಾವರಿ ನಿಗಮ, ಗಣಿ ಭೂ ಇಲಾಖೆ, ಟೌನ್ ಪ್ಲಾನಿಂಗ್ ಅಧಿಕಾರಿಗಳ ಮನೆ ಮೇಲೆ ದಾಳಿ ನಡೆದಿದೆ.
ಇನ್ನೂ ಬೆಂಗಳೂರು ಟೌನ್ ಮತ್ತು ಕಂಟ್ರಿ ಪ್ಲಾನಿಂಗ್ ನಿರ್ದೇಶಕ ತಿಪ್ಪೇಸ್ವಾಮಿ ಮನೆಯಲ್ಲಿ ಅಪಾರ ಪ್ರಮಾಣದ ಚಿನ್ನಾಭರಣ, ಬೆಳ್ಳಿ ವಸ್ತುಗಳು, ಲಕ್ಷ, ಲಕ್ಷ ನಗದು, ಬೆಲೆಬಾಳುವ ವಾಚ್‌ಗಳು ಪತ್ತೆಯಾಗಿವೆ. ತಿಪ್ಪೇಸ್ವಾಮಿ ಅವರ ಗಿರಿನಗರದ ಮನೆಯಲ್ಲಿ ಕಳೆದ ಐದು ಗಂಟೆಗಳಿಂದ ಲೋಕಾಯುಕ್ತ ಅಧಿಕಾರಿಗಳು ತೀವ್ರ ಶೋಧ ಕಾರ್ಯ ನಡೆಸಿದ್ದಾರೆ. ತಿಪ್ಪೇಸ್ವಾಮಿ ಮನೆಗೆ ಅಕ್ಕಸಾಲಿಗರನ್ನ ಕರೆಸಿದ್ದು ಚಿನ್ನಾಭರಣಗಳ ಮೌಲ್ಯಗಳನ್ನ ಲೆಕ್ಕ ಹಾಕಲಾಗುತ್ತಿದೆ.
ಗಿರಿನಗರದ 4ನೇ ಹಂತದ ವಿಶ್ವೇಶ್ವರಯ್ಯ ರಸ್ತೆ ಬಳಿ ತಿಪ್ಪೇಸ್ವಾಮಿ ಅವರ ಬಂಗಲೆ ಇದ್ದು, ಲೋಕಾಯುಕ್ತ ಎಸ್‌ಪಿ ಶ್ರೀನಾಥ್ ಜೋಶಿ ಅವರ ನೇತೃತ್ವದಲ್ಲಿ ಈ ದಾಳಿ ಮಾಡಲಾಗಿದೆ. ಬೆಳಗ್ಗೆ 7 ಗಂಟೆಯಿಂದಲೂ ಅಧಿಕಾರಿಗಳ ತಂಡ ತಿಪ್ಪೇಸ್ವಾಮಿ ಅವರ ಮನೆಯಲ್ಲಿ ಕಾರ್ಯಾಚರಣೆ ನಡೆಸುತ್ತಿದೆ. ನಾಲ್ವರು ಅಧಿಕಾರಿಗಳಿಗೆ ಸಂಬಂಧಿಸಿದ ಒಟ್ಟು 25 ಕಡೆಗಳಲ್ಲಿ ದಾಳಿ ನಡೆಸಿರೋ ಲೋಕಾಯುಕ್ತ ಅಧಿಕಾರಿಗಳು ದಾಖಲೆಗಳನ್ನು ಪರಿಶೀಲನೆ ಮಾಡುತ್ತಿದ್ದಾರೆ.