Prajwal Revanna: ಪ್ರಜ್ವಲ್ ರೇವಣ್ಣಗೆ ಬಿಗ್ ಶಾಕ್! 4ನೇ ಪ್ರಕರಣದ ಜಾಮೀನು ಅರ್ಜಿ ವಜಾ ಮಾಡಿದ ಕೋರ್ಟ್!

Share to all

ಬೆಂಗಳೂರು: ಹಾಸನ ಮಾಜಿ ಸಂಸದ, ಅತ್ಯಾಚಾರ ಆರೋಪಿ ಪ್ರಜ್ವಲ್ ರೇವಣ್ಣಗೆ ಹೈಕೋರ್ಟ್ ಬಿಗ್ ಶಾಕ್ ಕೊಟ್ಟಿದೆ. ಅತ್ಯಾಚಾರ ಮತ್ತು ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾಮೀನು ಅರ್ಜಿ ವಜಾಗೊಂಡಿದೆ. ಈ ಹಿಂದೆ ಮೂರು ಪ್ರಕರಣಗಳಲ್ಲಿ ಜಾಮೀನು ಅರ್ಜಿ ವಜಾಗೊಂಡಿತ್ತು. ನಾಲ್ಕನೇ ಪ್ರಕರಣದಲ್ಲಿ ಆದೇಶ ಬಾಕಿಯಿತ್ತು. ಇದೀಗ ನಾಲ್ಕನೇ ಪ್ರಕರಣದ ಜಾಮೀನು ಅರ್ಜಿಯನ್ನು ಸಹ ಹೈಕೋರ್ಟ್ ಏಕಸದಸ್ಯ ಪೀಠ ವಜಾಗೊಳಿಸಿದೆ.

ಮೂರು ಅತ್ಯಾಚಾರ ಕೇಸ್, ಒಂದು ಅಶ್ಲೀಲ ದೃಶ್ಯ ಪ್ರಕರಣದ ಜಾಮೀನು ಅರ್ಜಿಯನ್ನು ಕೋರ್ಟ್​ ವಜಾ ಮಾಡಿತ್ತು. ಆದ್ರೆ ನಾಲ್ಕನೆ ಪ್ರಕರಣದ ಜಾಮೀನಿ ಅರ್ಜಿಯ ಆದೇಶವನ್ನು ಕಾಯ್ದಿರಿಸಿತ್ತು. ಇಂದು ಹೈಕೋರ್ಟ್​, ಪ್ರಜ್ವಲ್ ರೇವಣ್ಣ ವಿರುದ್ಧ 4ನೇ ಪ್ರಕರಣ ಜಾಮೀನು ಅರ್ಜಿಯನ್ನು ಸಹ ವಜಾಗೊಳಿಸಿ ಆದೇಶ ಹೊರಡಿಸಿದೆ.

ಅಶ್ಲೀಲ ದೃಶ್ಯ ಪ್ರಕರಣ ಸೇರಿದಂತೆ ಇತರೆ ಒಟ್ಟು ನಾಲ್ಕು ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ ಆಗಸ್ಟ್​ನಲ್ಲಿ 2,144 ಪುಟಗಳ ಚಾರ್ಜ್​​​ಶೀಟ್​ ಸಲ್ಲಿಸಿತ್ತು. ಇದರ ಬೆನ್ನಲ್ಲೇ ಪ್ರಜ್ವಲ್ ರೇವಣ್ಣ ಸಹ ಜಾಮೀನಿಗಾಗಿ ಕೆಳಗಿನ ಕೋರ್ಟ್​ನಲ್ಲಿ ಕಸರತ್ತು ನಡೆಸಿದ್ದರು. ಆದ್ರೆ, ಅದು ಸಾಧ್ಯವಾಗಿಲ್ಲ, ಈಗ ಹೈಕೋರ್ಟ್​ ಸಹ ನಾಲ್ಕಕ್ಕೆ ನಾಲ್ಕು ಪ್ರಕರಣದ ಜಾಮೀನು ಅರ್ಜಿಯನ್ನು ತಿರಸ್ಕೃತ ಮಾಡಿದೆ.


Share to all

You May Also Like

More From Author