ಸಂಡೂರು: ರಾಜ್ಯದಲ್ಲಿ ಚನ್ನಪಟ್ಟಣ, ಸಂಡೂರು, ಶಿಗ್ಗಾಂವಿ ಕ್ಷೇತ್ರಗಳಿಗೆ ನಡೆದ ಉಪಚುನಾವಣೆಯ ಫಲಿತಾಂಶ ಇಂದು ಹೊರಬೀಳುತ್ತಿದೆ. ಸಂಡೂರು ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಅನ್ನಪೂರ್ಣ ತುಕಾರಾಂ ಅವರು ಜಯಭೇರಿ ಬಾರಿಸಿದ್ದಾರೆ. ಅನ್ನಪೂರ್ಣ ಅವರು 9 ಸಾವಿರಕ್ಕೂ ಹೆಚ್ಚು ಮತಗಳಿಂದ ಗೆದ್ದಿದ್ದಾರೆ.
ಬಿಜೆಪಿ ಅಭ್ಯರ್ಥಿ ಬಂಗಾರು ಹನುಮಂತ ಸೋಲೊಪ್ಪಿಕೊಂಡಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಗೆಲುವು ದಾಖಲಿಸುತ್ತಿದ್ದಂತೆ ಮತ ಎಣಿಕೆ ಕೇಂದ್ರ ಬಳಿ ಕಾರ್ಯಕರ್ತರು ಸಂಭ್ರಮಿಸಿದ್ದಾರೆ. ಸಿಎಂ ಸಿದ್ದರಾಮಯ್ಯ ಸೇರಿದಂತೆ ‘ಕೈ’ ನಾಯಕರ ಪರ ಜೈಕಾರ ಹಾಕಿದ್ದಾರೆ. ಅನ್ನಪೂರ್ಣ ತುಕಾರಾಂ ಅವರು ಜಯಭೇರಿ ಬಾರಿಸಿದ್ದಾರೆ. ಅಧಿಕೃತ ಘೋಷಣೆಯೊಂದೇ ಬಾಕಿ ಇದೆ.