ಬೆಂಗಳೂರು:- ಸಾಕಷ್ಟು ನಿರೀಕ್ಷೆ ಹುಟ್ಟು ಹಾಕಿದ್ದ ಕರ್ನಾಟಕದ ಚನ್ನಪಟ್ಟಣ, ಶಿಗ್ಗಾಂವಿ ಮತ್ತು ಸಂಡೂರು ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆ ಫಲಿತಾಂಶ ಪ್ರಕಟವಾಗಿದೆ. ಮೂರೂ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಗೆಲವು ಸಾಧಿಸಿದ್ದಾರೆ.
ಆರಂಭದಲ್ಲಿ ಜಿದ್ದಾಜಿದ್ದಿನ ಕಣವಾಗಿದ್ದ ಸಂಡೂರಿನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಈ.ಅನ್ನಪೂರ್ಣ ಗೆಲುವು ಸಾಧಿಸುವಲ್ಲಿ ಯಶಸ್ವಿಯಾಗಿದ್ದಾರೆ. 9,230 ಮತಗಳ ಅಂತರದಿಂದ ಬಿಜೆಪಿ ಅಭ್ಯರ್ಥಿ ಬಂಗಾರ ಹುನುಮಂತ ವಿರುದ್ಧ ಜಯಗಳಿಸಿದ್ದಾರೆ
ಮಾಜಿ ಸಿಎಂ, ಸಂಸದ ಬಸವರಾಜ ಬೊಮ್ಮಾಯಿಗೆ ಪ್ರತಿಷ್ಠೆಯ ಕಣವಾಗಿದ್ದ ಶಿಗ್ಗಾಂವಿಯಲ್ಲಿ ಬಿಜೆಪಿಯ ಭರತ್ ಬೊಮ್ಮಾಯಿಗೆ ಸೋಲಾಗಿದೆ. ಈ ಮೂಲಕ ಬೊಮ್ಮಾಯಿ ಕುಟುಂಬದ ಮೂರನೇ ತಲೆಮಾರು ವಿಧಾನಸಭೆ ಪ್ರವೇಶಿಸುವುದು ತಪ್ಪಿಹೋಗಿದೆ. ಬಂಡಾಯದ ಬಿಸಿಯ ನಡುವೆಯೂ ಸ್ಪರ್ಧಿಸಿದ್ದ ಕಾಂಗ್ರೆಸ್ನ ಯಾಸಿರ್ ಅಹಮದ್ ಖಾನ್ ಪಠಾಣ್ ಗೆಲುವು ಸಾಧಿಸಿದ್ದಾರೆ.
ಚನ್ನಪಟ್ಟಣ ವಿಧಾನಸಭಾ ಕ್ಷೇತ್ರ ಉಪ ಚುನಾವಣೆ ಇಡೀ ದೇಶದ ಗಮನ ಸೆಳೆದಿತ್ತು. ಚನ್ನಪಟ್ಟಣ ವಿಧಾನಸಭಾ ಕ್ಷೇತ್ರ ಉಪ ಚುನಾವಣೆ ಫಲಿತಾಂಶ ಪ್ರಕಟವಾಗಿದ್ದು, ಕಾಂಗ್ರೆಸ್ ಅಭ್ಯರ್ಥಿ ಸಿಪಿ ಯೋಗೇಶ್ವರ್ ಅವರಿಗೆ ಗೆಲುವಾಗಿದೆ. ಎನ್ಡಿಎ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಅವರಿಗೆ ಸೋಲಾಗಿದೆ. ಈ ಮೂಲಕ ನಿಖಿಲ್ ಕುಮಾರಸ್ವಾಮಿ ಅವರಿಗೆ ಇದು ಮೂರನೇ ಸೋಲಾಗಿದೆ.