ಮಂಡ್ಯ: ಕರ್ನಾಟಕದ ಮೂವರ ರಾಜೀನಾಮೆಯಿಂದ ತೆರವಾದ ಮೂರು ಕ್ಷೇತ್ರಗಳಿಗೆ ಉಪ ಚುನಾವಣೆ ನಡೆದರೂ ರಾಜ್ಯದ ಮಟ್ಟಿಗೆ ಹೆಚ್ಚು ಸದ್ದು ಮಾಡಿದ್ದು ಹೈವೋಲ್ಟೇಜ್ ಕಣ ಚನ್ನಪಟ್ಟಣ. ತುರುಸಿನ ಸ್ಪರ್ಧೆಯಲ್ಲಿ ಎಲ್ಲರ ಲೆಕ್ಕಾಚಾರಗಳನ್ನು ತಲೆ ಕೆಳಗೆ ಮಾಡಿ ಕಾಂಗ್ರೆಸ್ ಅಭ್ಯರ್ಥಿ ಸಿಪಿ ಯೋಗೇಶ್ವರ್ ಗೆಲುವಿನ ನಗಾರಿ ಬಾರಿಸಿದ್ದಾರೆ. ಕಾಂಗ್ರೆಸ್ ರೂಪಿಸಿದ ಚಕ್ರವ್ಯೂಹ ಬೇಧಿಸುವಲ್ಲಿ ನಿಖಿಲ್ ಕುಮಾರಸ್ವಾಮಿ 3ನೇ ಬಾರಿ ವಿಫಲರಾಗಿದ್ದಾರೆ.
ಇದರ ಬೆನ್ನಲ್ಲೇ ನಿಖಿಲ್ ಕುಮಾರಸ್ವಾಮಿ ಸೋಲನುಭವಿಸಿದ್ದಕ್ಕೆ ಅವರ ಅಭಿಮಾನಿಯೊಬ್ಬರು ಆತ್ಮಹತ್ಯೆಗೆ ಯತ್ನಿಸಿದ ಘಟನೆ ನ್ನಪಟ್ಟಣದ ಕೂಡ್ಲೂರು ಬಳಿಯ ಶ್ರೀರಾಂಪುರ ಗ್ರಾಮದಲ್ಲಿ ನಡೆದಿದೆ. ಮಂಜುನಾಥ್ ಎಂಬ ವ್ಯಕ್ತಿ ಆತ್ಮಹತ್ಯೆಗೆ ಯತ್ನಿಸಿದವರಾಗಿದ್ದು, ನಾನು ನಿಖಿಲ್ ಅಭಿಮಾನಿ, ನನ್ನ ಸಾವಿಗೆ ನಾನೇ ಕಾರಣ, ಜೈ ಜೆಡಿಎಸ್’ ಎಂದು ಪತ್ರ ಬರೆದಿಟ್ಟು ಅವರು ವಿಷ ಸೇವನೆ ಮಾಡಿಕೊಂಡಿದ್ದಾರೆ. ಮಂಜುನಾಥ್ ಅವರನ್ನು ಮಂಡ್ಯದ ಆಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ.