ಬೆಂಗಳೂರು: ರಾಜ್ಯದಲ್ಲಿ ನಿಯಮಗಳನ್ನು ಗಾಳಿಗೆ ತೂರಿ ಬಿಪಿಎಲ್ ಕಾರ್ಡ್ ಬಳಕೆ ಮಾಡುವರರು ಹೆಚ್ಚಾಗಿದ್ದು, ಅಂತಹವರ ವಿರುದ್ಧ ಕ್ರಮಕ್ಕೆ ಇದೀಗ ಆಹಾರ ಇಲಾಖೆ ಮುಂದಾಗಿತ್ತು. ರಾಜ್ಯದಲ್ಲಿ ಆಪರೇಷನ್ ಬಿಪಿಎಲ್ ಶುರುವಾಗಿದೆ. ಇದು ಸಾಮಾನ್ಯವಾಗಿಯೇ ಗದ್ದಲ ಮೂಡಿಸಿದೆ. ಸದ್ಯ 22 ಲಕ್ಷ ಅನರ್ಹ ಬಿಪಿಎಲ್ ಕಾರ್ಡ್ಗಳಿವೆ ಅನ್ನೋ ಸಂಖ್ಯೆ ಬೆಚ್ಚಿ ಬೀಳಿಸುತ್ತಿದೆ. ಅಲ್ಲದೇ ಎಲ್ಲಿ ನಮ್ಮ ಕಾರ್ಡ್ ರದ್ದಾಗುತ್ತೋ ಅಂತ ಜನಸಾಮಾನ್ಯರ ನಿದ್ದೆಗೆಡಿಸಿದೆ.
ಇದರ ಬೆನ್ನಲ್ಲೇ ಆಹಾರ ಇಲಾಖೆ ಪಡಿತರ ಚೀಟಿಗಳ ಪರಿಷ್ಕರಣೆ ಮತ್ತು ತಿದ್ದುಪಡಿ ಆರಂಭಿಸುತ್ತಿದೆ. ಬೆಂಗಳೂರು ಸೇರಿದಂತೆ ರಾಜ್ಯದೆಲ್ಲೆಡೆ ರದ್ದಾಗಿರುವ ಬಿಪಿಎಲ್ ಕಾರ್ಡ್‌ಗಳ ತಿದ್ದುಪಡಿ ಕಾರ್ಯ ನಡೆಯಲಿದೆ. ಆಧಾರ್ ಪ್ಯಾನ್ ಕಾರ್ಡ್, ಐಟಿ ರಶೀದಿ ಮೂಲಕ ಅರ್ಹತೆ ಹೊಂದಿರುವವರು ಕಾರ್ಡ್‌ಗಳನ್ನ ಸರಿ ಪಡಿಸಿಕೊಳ್ಳಬಹುದಾಗಿದೆ.
ಬೆಂಗಳೂರಿನಲ್ಲಿ ಎಲ್ಲಿಲ್ಲಿ ಕಾರ್ಡ್ ತಿದ್ದುಪಡಿ?
- ಪೂರ್ವ ವಲಯ- ರಾಜಾಜಿನಗರ ಐಆರ್‌ಐ
- ಪಶ್ಚಿಮ ವಲಯ- ಬಸವನಗುಡಿ
- ಉತ್ತರ ವಲಯ- ಮೆಜೆಸ್ಟಿಕ್ ಆಹಾರ ಇಲಾಖೆ ಕಚೇರಿ
- ಕೆಂಗೇರಿ & ಬನಶಂಕರಿ-ಆಹಾರ ಇಲಾಖೆ ಕಚೇರಿ
- ಆರ್‌ಟಿನಗರ-ಆಹಾರ ಇಲಾಖೆ ಕಚೇರಿ
- ವಯ್ಯಾಲಿಕಾವಲ್-ಆಹಾರ ಇಲಾಖೆ ಕಚೇರಿ
- ಯಲಹಂಕ- ಆಹಾರ ಇಲಾಖೆ ಕಚೇರಿ
ಬಿಪಿಎಲ್ ಕಾರ್ಡ್ ತಿದ್ದುಪಡಿ ಹೇಗೆ?
ಅಧಿಕಾರಿಗಳು ಸ್ಥಳ ಪರಿಶೀಲನೆ ಮಾಡಬೇಕು. ಸರ್ಕಾರಿ ನೌಕರರ, ತೆರಿಗೆ ಪಾವತಿದಾರರ ಅನ್ನೋದನ್ನು ಪರಿಶೀಲಿಸಬೇಕು. ಕಾರ್ಡ್ ಹೊಂದಿರುವವರು ಬಡವರು ಇದ್ದಾರಾ? ಶ್ರೀಮಂತರು ಇದ್ದಾರಾ? ಅಂತ ಮನೆ ಪರಿಶೀಲಿಸಬೇಕು. ಆರ್‌ಡಿ ನಂಬರ್ ಪರಿಶೀಲನೆ ಮಾಡಬೇಕು. ಸ್ಥಳ ಪರಿಶೀಲನೆ ಜೊತೆಗೆ ದಾಖಲೆ ಪರಿಶೀಲನೆ ಮಾಡಬೇಕು. ಹೀಗೆ ಆಹಾರ ನಿರೀಕ್ಷಕರು ಒನ್ ಬೈ ಒನ್ ಆಗಿ ಕಾರ್ಡ್‌ಗಳನ್ನು ಪರಿವರ್ತನೆ ಮಾಡಬೇಕಿದೆ. ಏಕಾಏಕಿ ಮೂಲ ಸ್ಥಾನಕ್ಕೆ ಶಿಫ್ಟ್ ಮಾಡಲು ಆಗಲ್ಲ. ಎನ್‌ಐಸಿ ಸಾಫ್ಟ್‌ವೇರ್ ಮೂಲಕ ಕಾರ್ಡ್ ಕನ್ವರ್ಟ್ ಮಾಡಬೇಕು. ಕಾರ್ಡ್ ಬದಲಿಸಲು ಕನಿಷ್ಠ 10 ರಿಂದ 15 ದಿನ ಸಮಯಾವಕಾಶ ಬೇಕಾಗುತ್ತದೆ.
ಅದೇನೆ ಇರಲಿ, ರದ್ದಾದ ಕಾರ್ಡ್‌ನಿಂದ ಅಕ್ಕಿ ಬರದೇ ಜನ ಕಚೇರಿಯಿಂದ ಕಚೇರಿಗೆ ಅಲೆಯುತ್ತಾ ಇದ್ದಾರೆ. ಹೀಗಾಗಿ ಎಚ್ಚೆತ್ತಿರುವ ಸರ್ಕಾರ ಇಂದಿನಿಂದ ಬಿಪಿಎಲ್ ಕಾರ್ಡ್‌ಗಳ ಪರಿಶೀಲನೆಗೆ ಮುಂದಾಗಿದೆ. ಅರ್ಹತೆ ಇದ್ದರೂ ಬಿಪಿಎಲ್ ಕಾರ್ಡ್‌ನಿಂದ ವಂಚಿತರಾಗಿರುವವರಿಗೆ ಶೀಘ್ರವೇ ನ್ಯಾಯ ದೊರಕಿಸಿಕೊಡಬೇಕಿದೆ.