ಪ್ರೀತಿ ನಿರಾಕರಿಸಿದ ನರ್ಸ್: ಆಸ್ಪತ್ರೆಯಲ್ಲೇ ಮಚ್ಚಿನಿಂದ ಹಲ್ಲೆ ಮಾಡಿದ ಪಾಗಲ್ ಪ್ರೇಮಿ!

Share to all

ಬೆಳಗಾವಿ:- ನಗರದ ಖಾಸಗಿ ಆಸ್ಪತ್ರೆಯಲ್ಲಿ ಪಾಗಲ್ ಪ್ರೇಮಿಯೊಬ್ಬ ನರ್ಸ್ ಗೆ ಮಚ್ಚಿನಿಂದ ಹಲ್ಲೆ ಮಾಡಿದ್ದಾರೆ.ಕೃತ್ಯದ ಸಿಸಿಟಿವಿ ವಿಡಿಯೋ ಕೂಡ ಲಭ್ಯವಾಗಿದೆ. ಪಾಗಲ್ ಪ್ರೇಮಿ ಪ್ರಕಾಶ್ ಜಾಧವ್​​ ಎಂಬಾತ ಕೃತ್ಯ ಎಸಗಿದ್ದಾನೆ. ಅಕ್ಟೋಬರ್ 30ರಂದು ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಮಗಳ ಮೇಲಿನ ದಾಳಿಯಿಂದ ಮನನೊಂದ ಆಕೆಯ ತಂದೆ ಮೃತಪಟ್ಟಿದ್ದಾರೆ.

ಆರೋಪಿ ಪ್ರಕಾಶ್ ಪ್ರೀತಿಸುವಂತೆ ನರ್ಸ್ ಹಿಂದೆ ಬಿದ್ದಿದ್ದ. ಆಕೆ ಪ್ರೀತಿಸಲು ನಿರಾಕರಿಸಿದ್ದಕ್ಕೆ ಮಾರಣಾಂತಿಕ ಹಲ್ಲೆ ಮಾಡಿದ್ದಾನೆ. ಕೈ ಚೀಲದಲ್ಲಿ ಮಚ್ಚು ಇಟ್ಟುಕೊಂಡು ಬಂದಿದ್ದ ಆತ, ಆಸ್ಪತ್ರೆಯ ಕೌಂಟರ್​ಗೆ ನುಗ್ಗಿ ನರ್ಸ್​ ಮೇಲೆ ಮಚ್ಚಿನಿಂದ ಹಲ್ಲೆ ಮಾಡಿದ್ದಾನೆ. ಆತನ ಕೃತ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ.

ಘಟನೆ ಬಗ್ಗೆ ಮಾಹಿತಿ ದೊರೆತ ಕೂಡಲೇ ಆರೋಪಿಯನ್ನು ಬಂಧಿಸಲಾಗಿದೆ. ಖಡೇಬಜಾರ್ ಪೊಲೀಸ್​​​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇನ್ನೂ ಆರೋಪಿ ಕೆಲ ದಿನಗಳ ಹಿಂದೆ ತನ್ನ ಕುಟುಂಬದ ಜೊತೆ ನರ್ಸ್​ ಮನೆಗೆ ಹೋಗಿದ್ದ. ನರ್ಸ್ ಕುಟುಂಬಸ್ಥರ ಬಳಿ ಮದುವೆ ಮಾಡಿಕೊಡುವಂತೆ ಪ್ರಸ್ತಾಪಿಸಿದ್ದ. ಆದರೆ ಮದುವೆ ಮಾಡಿಕೊಡಲು ನರ್ಸ್ ಕುಟುಂಬಸ್ಥರು ನಿರಾಕರಿಸಿದ್ದರು. ಇದಾದ ಬಳಿಕವೂ, ಮದುವೆ ಆಗುವಂತೆ ನರ್ಸ್​ ಬೆನ್ನುಬಿದ್ದದ್ದ ಪ್ರಕಾಶ್​​, ಆಕೆ ಸ್ಪಂದಿಸದಿದ್ದಾಗ ಆಸ್ಪತ್ರೆಗೆ ನುಗ್ಗಿ ಮಚ್ಚಿನಿಂದ ಹಲ್ಲೆ ಮಾಡಿದ್ದಾನೆ.

ಏತನ್ಮಧ್ಯೆ ಮಗಳ ಮೇಲಿನ ಹಲ್ಲೆ ವಿಚಾರದಿಂದ ನೊಂದಿದ್ದ ನರ್ಸ್ ತಂದೆ ಮೃತಪಟ್ಟಿದ್ದಾರೆ. ಮಗಳ ಸ್ಥಿತಿ ಹೀಗಾಯ್ತಲ್ಲ ಎಂದು ನೊಂದಿದ್ದ ಅವರು, ಘಟನೆ ನಡೆದು 15 ದಿನದ ಬಳಿಕ ಮೃತಪಟ್ಟಿದ್ದಾರೆ. ಆರೋಪಿಯಿಂದ ಮಗಳಿಗೆ ಜೀವ ಬೆದರಿಕೆ ಇದ್ದ ಬಗ್ಗೆ ಅವರು ಹೆಚ್ಚು ಆತಂಕಕ್ಕೊಳಗಾಗಿದ್ದರು ಎನ್ನಲಾಗಿದೆ.


Share to all

You May Also Like

More From Author