ವಿಜಯಪುರ: ಕಾಂಗ್ರೆಸ್ ಜೊತೆಗೆ ಕೂರುವಂತಹ ಚಿಲ್ಲರೆ ಕೆಲಸ ನಾವು ಮಾಡುವುದಿಲ್ಲ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಒಂದು ಶಬ್ದವನ್ನು ವಾಪಸ್ ತೆಗೆದುಕೊಳ್ಳುವುದಿಲ್ಲ. ಕಾಂಗ್ರೆಸ್ ಜೊತೆಗೆ ಕೂರುವಂತಹ ಚಿಲ್ಲರೆ ಕೆಲಸ ನಾವು ಮಾಡುವುದಿಲ್ಲ. ರಾಜ್ಯಾಧ್ಯಕ್ಷ ಹೋಗಿ ಡಿಕೆಶಿ ಬಳಿ 20 ಪತ್ರಕ್ಕೆ ಸಹಿ ಹಾಕಿಸಿಕೊಂಡಿದ್ದರು.
ಆ ವಿಡಿಯೋ ನನ್ನ ಬಳಿ ಇದೆ. ನಾನು ಕಾಂಗ್ರೆಸ್ ಜೊತೆಗೆ ಕೈ ಜೋಡಿಸುವ ಕೆಲಸ ಮಾಡಲ್ಲ. ಪಕ್ಷಕ್ಕೆ ದ್ರೋಹ ಮಾಡುವುದಿಲ್ಲ. ಕೆಲವರೆಲ್ಲ ರಾತ್ರಿ ಡಿಕೆ ಶಿವಕುಮಾರ್, ಸಿದ್ದರಾಮಯ್ಯ ಮನೆಗೆ ಹೋಗುತ್ತಾರೆ. ನಾನು ಯಾರ ಮನೆಗೆ ಹೋಗಿ ಕೆಲಸ ಮಾಡಿಕೊಡಿ ಎಂದು ಕೇಳುವ ವ್ಯಕ್ತಿಯಲ್ಲ. ಅದಕ್ಕೆ ನನ್ನ ಮೇಲೆ ಕೇಸ್ಗಳ ಮೇಲೆ ಕೇಸ್ ಹಾಕುತ್ತಲೇ ಇದ್ದಾರೆ. ನನ್ನ ಮೇಲೆ ಕೇಸ್ ಹಾಕಿ ಬ್ಲ್ಯಾಕ್ಮೇಲ್ ಮಾಡಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.
ಇನ್ನೂ ನಾನು ಯಾವುದಕ್ಕೂ ಹೆದರುವುದಿಲ್ಲ, ಕ್ಷಮಾಪಣೆ ಕೇಳುವುದಿಲ್ಲ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಭ್ರಷ್ಟಾಚಾರದ ವಿರುದ್ಧ, ವಕ್ಫ್ ವಿರುದ್ಧ ಹೋರಾಟ ಮಾಡುತ್ತಿದ್ದೇವೆ. ಎಲ್ಲರನ್ನೂ ದೆಹಲಿಗೆ ಕರೆಯಿರಿ ಆಗ ಬಂದು ಕರ್ನಾಟಕದಲ್ಲಿ ಏನು ನಡೆದಿದೆ ಎಂದು ಹೇಳುತ್ತೇವೆ. ಒಬ್ಬರನ್ನು ಕರೆದು ಸಮಾಧಾನ ಮಾಡಲು ಆಗುವುದಿಲ್ಲ. ನಾನು ಯಾವುದಕ್ಕೂ ಹೆದರುವುದಿಲ್ಲ, ಕ್ಷಮಾಪಣೆ ಕೇಳುವುದಿಲ್ಲ ಎಂದರು.