ನವದೆಹಲಿ:- ಇತ್ತೀಚಿನ ದಿನಗಳಲ್ಲಿ ಬಾಂಬ್ ಬೆದರಿಕೆ ಪ್ರಕರಣಗಳು ಹಾಗೂ ರಾಜಕಾರಣಿಗಳು ಹಾಗೂ ಸಿನಿಮಾ ಸೆಲೆಬ್ರಿಟಿ ಗಳಿಗೆ ಕೊಲ್ಲುವುದಾಗಿ ಬೆದರಿಕೆ ಸಂದೇಶಗಳು ಬರುತ್ತಿದೆ. ಅದರಂತೆ ಇದೀಗ ಪ್ರಧಾನಿ ನರೇಂದ್ರ ಮೋದಿ ಹತ್ಯೆ ಸಂಚಿಗೆ ಪ್ಲ್ಯಾನ್ ಮಾಡಿರೋ ಬೆದರಿಕೆ ಸಂದೇಶ ಮುಂಬೈ ಪೊಲೀಸರಿಗೆ ಬಂದಿದೆ.
ಕರೆ ಮಾಡಿದವರನ್ನು ಮಹಿಳೆ ಎಂದು ಗುರುತಿಸಲಾಗಿದೆ. ಮುಂಬೈನ ಅಂಬೋಲಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆಕೆಯನ್ನು ಬಂಧಿಸುವ ಪ್ರಯತ್ನ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಮಹಿಳೆ ಮಾನಸಿಕ ಅಸ್ವಸ್ಥೆ ಎಂದು ಹೇಳಲಾಗುತ್ತಿದೆ, ಅಧಿಕಾರಿಗಳು ಕಾರ್ಯವಿಧಾನಗಳನ್ನು ಅನುಸರಿಸಿ ತನಿಖೆಯನ್ನು ಮುಂದುವರಿಸುತ್ತಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಪೊಲೀಸರು ತನಿಖೆಯನ್ನು ಪ್ರಾರಂಭಿಸಿದ್ದಾರೆ ಮತ್ತು ಶಂಕಿತರನ್ನು ಪತ್ತೆಹಚ್ಚುವಾಗ ಎಲ್ಲಾ ಪ್ರೋಟೋಕಾಲ್‌ಗಳನ್ನು ಅನುಸರಿಸುತ್ತಿದ್ದಾರೆ ಎಂದು ಅವರು ಹೇಳಿದರು.