ತಿನುಸುಗಳ ಆಸೆ ತೋರಿಸಿ ಮಕ್ಕಳನ್ನು ಅಪಹರಣ ಮಾಡ್ತಿದ್ದ ಆಸಾಮಿಗೆ ಥಳಿತ.. ಹಿಗ್ಗಾಮುಗ್ಗ ಥಳಿಸಿದ ಸಾರ್ವಜನಿಕರು

Share to all

ತಿನುಸುಗಳ ಆಸೆ ತೋರಿಸಿ ಮಕ್ಕಳನ್ನು ಅಪಹರಣ ಮಾಡ್ತಿದ್ದ ಆಸಾಮಿಗೆ ಥಳಿತ.. ಹಿಗ್ಗಾಮುಗ್ಗ ಥಳಿಸಿದ ಸಾರ್ವಜನಿಕರು

ಹುಬ್ಬಳ್ಳಿ: ವ್ಯಕ್ತಿಯೊಬ್ಬ ಚಿಕ್ಕ ಮಕ್ಕಳಿಗೆ ಚಾಕಲೇಟ್ ಮತ್ತು ಹಣ್ಣು ಕೊಡಿಸುವ ಆಸೆ ತೋರಿಸಿ, ಮಕ್ಕಳನ್ನು ಅಪಹರಣ ಮಾಡ್ತಿದ್ದ ಹರಾಮಿಯನ್ನು ಸಾರ್ವಜನಿಕರು ಹಿಗ್ಗಾಮುಗ್ಗ ಥಳಿಸಿದ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ. ಮಕ್ಕಳಿಗೆ ಆಶೆ ತೋರಿಸಿ ಕರೆದುಕೊಂಡು ಹೋಗುತ್ತಿರುವ ವಿಡಿಯೋ ಕೂಡ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ.

ಹುಬ್ಬಳ್ಳಿಯ ಕಮರಿಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ತೋರವಿಹಕ್ಕಲ್ ನಲ್ಲಿ ಈ ಘಟನೆ ನಡೆದಿದ್ದು, ಓಣಿಯಲ್ಲಿ ಆಟ ಆಡುತ್ತಿರುವ ಮಕ್ಕಳನ್ನೇ ಟಾರ್ಗೆಟ್ ಮಾಡಿ ಕರೆದೊಯ್ಯುತ್ತಿದ್ದ ಆದಿಲ್ ಅಂಕಲಗಿ ಎಂಬಾತನನ್ನು ಸಾರ್ವಜನಿಕರು ಹಿಡಿದು ಹಿಗ್ಗಾಮುಗ್ಗ ಥಳಿಸಿ ಠಾಣೆಗೆ ಕರೆತಂದ ಪೊಲೀಸರಿಗೆ ಒಪ್ಪಿಸಿದ್ದಾರೆ. ಈತ ಹುಬ್ಬಳ್ಳಿಯ ಬೊಮ್ಮಾಪುರ ಓಣಿಯ ನಿವಾಸಿ ಎಂದು ತಿಳಿದು ಬಂದಿದೆ. ಮಕ್ಕಳಿಗೆ ಇಲ್ಲಸಲ್ಲದ ಆಸೆ ತೋರಿಸಿ ಅಪಹರಣ ಮಾಡುತ್ತಿದ್ದ ಆರೋಪಿಯ ಚಲನವಲನಗಳು ಸಿಸಿಟಿವಿಯಲ್ಲಿ ಸೆರೆಯಾಗಿವೆ. ಇದನ್ನ ಗಮನಿಸಿದ ಸಾರ್ವಜನಿಕರಿಂದ ಆರೋಪಿಯನ್ನ ಹಿಡಿದು ಥಳಿಸಿ ಪೊಲೀಸರಿಗೆ ಒಪ್ಪಿಸಿದ್ದಾರೆ.
ಆರೋಪಿಯನ್ನ ವಶಕ್ಕೆ ಪಡೆದ ಕಮರಿಪೇಟ್ ಪೊಲೀಸರು ವಿಚಾರಣೆ ನಡೆಸಿದ್ದಾರೆ.

ಉದಯ ವಾರ್ತೆ
ಹುಬ್ಬಳ್ಳಿ.


Share to all

You May Also Like

More From Author