ಧಾರವಾಡ: ಕುಡಿಯುವ ನೀರಿನ ಸಮಸ್ಯೆ ಚರ್ಚೆ.. ಜಿಲ್ಲಾ ಉಸ್ತವಾರಿ ಸಚಿವ ಸಂತೋಷ್ ಅವರಿಂದ ಉನ್ನತ ಮಟ್ಟದ ಸಭೆ*
ಬೆಂಗಳೂರು, ಏಪ್ರಿಲ್ 17: ಧಾರವಾಡ ಜಿಲ್ಲೆಯ ಗ್ರಾಮೀಣ ಹಾಗೂ ನಗರ ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಸಮಸ್ಯೆಗಳ ಕುರಿತು ಕಾರ್ಮಿಕ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್ ಲಾಡ್ ಅವರು ಇಂದು ವಿಕಾಸಸೌಧದಲ್ಲಿ ಉನ್ನತ ಮಟ್ಟದ ಸಭೆ ನಡೆಸಿದರು.
ಕುಡಿಯುವ ನೀರಿಗೆ ಯಾವುದೇ ತೊಂದರೆಯಾಗದಂತೆ ಅಗತ್ಯ ಕ್ರಮವನ್ನು ಅನುಸರಿಸಬೇಕು. ನೀರು ಪೂರೈಸಲು ವಿದ್ಯುತ್ ಸೇರಿದಂತೆ ಎಲ್ಲಾ ವ್ಯವಸ್ಥೆ ಮಾಡಿಕೊಳ್ಳಬೇಕು ಎಂದು ಸಚಿವರು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಈ ಸಭೆಯಲ್ಲಿ ಶಾಸಕರಾದ ಎನ್ ಎಚ್ ಕೋನರೆಡ್ಡಿ, ಸಲೀಂ ಅಹಮದ್, ಎಸ್ ವಿ ಸಂಕನೂರ, ಗ್ರಾಮೀಣಾಭಿವೃದ್ಧಿ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಅಂಜುಮ್ ಪರ್ವೇಜ್, ಧಾರವಾಡ ಜಿಲ್ಲಾಧಿಕಾ ದಿವ್ಯಪ್ರಭು ಜಿಆರ್‌ಜೆ, ನಗರಾಭಿವೃದ್ಧಿ ಇಲಾಖೆಯ ಕಾರ್ಯದರ್ಶಿ ದೀಪಾ ಚೋಳನ್, ಕೆಯುಐಡಿಎಫ್ ಸಿ ವ್ಯವಸ್ಥಾಪಕ ನಿರ್ದೇಶಕ ಶರತ್, ಹುಬ್ಬಳ್ಳಿ-ಧಾರವಾಡ
ಮಹಾನಗರ ಪಾಲಿಕೆಯ ಆಯುಕ್ತ ರುದ್ರೇಶ್ ಗಾಳಿ, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಅಧಿಕಾರಿಗಳು ಪಾಲ್ಗೊಂಡಿದ್ದರು.