ಕಾರು ಮತ್ತು ಲಾರಿ ಮದ್ಯೆ ಭೀಕರ ರಸ್ತೆ ಅಪಘಾತ..ಐವರ ದುರ್ಮರಣ..
ಹುಬ್ಬಳ್ಳಿ: ಕಾರು ಮತ್ತು ಲಾರಿಯ ನಡುವೆ ಭೀಕರ ಅಪಘಾತವೊಂದು ಇಂಗಳಹಳ್ಳಿ ಕ್ರಾಸ್ ಬಳಿ ನಡೆದಿದ್ದು, ಕಾರಿನಲ್ಲಿದ್ದ ಐವರು ಸ್ಥಳದಲ್ಲಿ ಸಾವಿಗೀಡಾಗಿದ್ದಾರೆ.
ಘಟನೆಯ ಮಾಹಿತಿ ತಿಳಿಯುತ್ತಿದ್ದ ಹಾಗೇ ಸ್ಥಳಕ್ಕೆ ದೌಡಾಯಿಸಿರುವ ಹುಬ್ಬಳ್ಳಿ ಗ್ರಾಮೀಣ ಠಾಣೆಯ ಪೊಲೀಸರು, ಶವಗಳನ್ನ ಹುಬ್ಬಳ್ಳಿಯ ಕಿಮ್ಸಗೆ ರವಾನೆ ಮಾಡಿದ್ದಾರೆ.
ಕಾರಿನಲ್ಲಿದ್ದ ಐವರು ಸಾವಿಗೀಡಾಗಿದ್ದರಿಂದ ಯಾವುದೇ ಮಾಹಿತಿ ಪೊಲೀಸರಿಗೆ ಲಭಿಸಿಲ್ಲ. ಇವರು ಎಲ್ಲಿಂದ ಎಲ್ಲಿಗೆ ಹೊರಟಿದ್ದರೂ ಮತ್ತು ಅವರ ನಿಖರವಾದ ಮಾಹಿತಿಯನ್ನ ಪೊಲೀಸರು ಕಲೆ ಹಾಕುತ್ತಿದ್ದಾರೆ.