ಮರಳು ಮಾಫಿಯಾದ ವಿರುದ್ಧ ಸಿಡಿದೆದ್ದ ಕರವೇ..ಹುಬ್ಬಳ್ಳಿಯಿಂದ ಧಾರವಾಡದವರೆಗೆ ಬೈಕ್ ರ್ಯಾಲಿ..
ಹುಬ್ಬಳ್ಳಿ:- ಹುಬ್ಬಳ್ಳಿ-ಧಾರವಾಡದಲ್ಲಿ ಮರಳು ಮಾಫಿಯಾದ ವಿರುದ್ದ ಕರವೇ (ಪ್ರವೀಣ ಶೆಟ್ಟಿ ಬಣ) ಫಸ್ಟ್ ಟೈಮ್ ಬೃಹತ್ ಪ್ರತಿಬಟನೆ ನಡೆಸಿತು.ಹುಬ್ಬಳ್ಳಿಯಿಂದ ಧಾರವಾಡ ಜಿಲ್ಲಾಧಿಕಾರಿ ಕಛೇರಿವರೆಗೆ ಸಾವಿರಾರು ಬೈಕ್ ಗಳೊಂದಿಗೆ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.
ಹೌದು ಧಾರವಾಡ ಜಿಲ್ಲೆಯಲ್ಲಿ ಮರಳು ಮಾಫಿಯಾದ ವಿರುದ್ಧ ಕರವೇ ಮುಖಂಡ ಮಂಜುನಾಥ ಲೂತಿಮಠ ನೇತೃತ್ವದಲ್ಲಿ ಹಲವು ಬಾರಿ ಪ್ರತಿಭಟನೆ ಹಾಗೂ ಮನವಿಗಳನ್ನು ಕೊಟ್ಟರೂ ಪ್ರಯೋಜನವಾಗದ ಹಿನ್ನೆಲೆಯಲ್ಲಿ ಇಂದು ಬೈಕ್ ಗಳ ಮೆರವಣಿಗೆ ಮೂಲಕ ಪ್ರತಿಭಟನೆ ನಡೆಸಿತು.
ಹುಬ್ಬಳ್ಳಿ ಇತಿಹಾಸದಲ್ಲಿಯೇ ಸಂಘಟನೆಯೊಂದು ಮರಳು ಮಾಫಿಯಾದ ವಿರುದ್ದ ಬೀದಿಗಿಳಿದ ದೊಡ್ಡ ಮಟ್ಟದ ಪ್ರತಿಭಟನೆ ನಡೆಸಿದ್ದು ಅಧಿಕಾರಿಗಳಿಗೆ ನಡುಕ ಹುಟ್ಟಿಸಿದೆ.