ಬೆಂಗಳೂರು ಕಾಲ್ತುಳಿತ ಪ್ರಕರಣ..ಕಮೀಷನರ್ ಸೇರಿ ಹಲವರು ಸಸ್ಪೆಂಡ್..
ಬೆಂಗಳೂರು:-ಆರ್ ಸಿ ಬಿ ಸಂಭ್ರಮಾಚರಣೆಯ ಸಂದರ್ಭದಲ್ಲಿ ಕಾಲ್ತುಳಿತ ಪ್ರಕರಣವನ್ನು ಸರಕಾರ ಗಂಭೀರವಾಗಿ ಪರಿಗಣಿಸಿದ್ದು ಬೆಂಗಳೂರು ಕಮೀಷನರ್ ಸೇರಿ ಐವರು ಪೋಲೀಸ ಅಧಿಕಾರಿಗಳನ್ನು ಸಸ್ಪೆಂಡ್ ಮಾಡಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ.
Oplus_16777216
ಕಬ್ಬನ್ ಪಾರ್ಕ್ ಪೊಲೀಸ್ ಸ್ಟೇಷನ್ ಪೊಲೀಸ್ ಇನ್ಸಪೆಕ್ಞರ್ ಸೇರಿದಂತೆ ಆ ಭಾಗದ ಎಸಿಪಿ, ಸೆಂಟ್ರಲ್ ಡಿಸಿಪಿ , ಕ್ರೀಡಾಂಗಣದ ಉಸ್ತುವಾರಿ ವಹಿಸಿದ್ದ ಹೆಚ್ಚುವರಿ ಪೊಲೀಸ್ ಆಯುಕ್ತರು ಮತ್ತು ಬೆಂಗಳೂರು ನಗರದ ಪೊಲೀಸ್ ಕಮೀಷನರ್ ರನ್ನು ತಕ್ಷಣದಿಂದ ಅಮಾನತ್ತು ಗೊಳಿಸಲು ತೀರ್ಮಾನಿಸಲಾಗಿದೆ. ಈ ದುರಂತಕ್ಕೆ ಸಂಬಂಧಪಟ್ಟ ಚರ್ಚೆಯ ನಂತರ ತೆಗೆದುಕೊಂಡ ತೀರ್ಮಾನಗಳಾಗಿವೆ. ಉಪಮುಖ್ಯಮಂತ್ರಿಗಳು, ಗೃಹಸಚಿವರು, ಸಚಿವರಾದ ಎಚ್.ಕೆ.ಪಾಟೀಲ್, ಸುಧಾಕರ್ , ಮಹಾದೇವಪ್ಪ ಸೇರಿದಂತೆ ಅಧಿಕಾರಿಗಳು ಚರ್ಚೆಯಲ್ಲಿ ಭಾಗವಹಿಸಿದ್ದರು.
ಮೇಲ್ನೋಟಕ್ಕೆ ಈ ಅಧಿಕಾರಿಗಳ ಬೇಜವಾಬ್ದಾರಿತನ, ಅಲಕ್ಷ್ಯ ಕಂಡುಬರುತ್ತಿದ್ದು, ಇವರುಗಳನ್ನು ಅಮಾನತ್ತುಗೊಳಿಸಲು ತೀರ್ಮಾನಿಸಲಾಗಿದೆ.