ನೂತನ ರಾಜ್ಯಾಧ್ಯಕ್ಷರಿಗೆ ಅಭಿನಂದನೆ ಸಲ್ಲಿಸಿದ ಮಾಜಿ ಸಚಿವ ಶಂಕರ ಪಾಟೀಲ ಮುನೇನಕೊಪ್ಪ ಹಾಗೂ ಪ್ರದೀಪ್ ಶೆಟ್ಟರ್.
ಬೆಂಗಳೂರು –
ಬಿಜೆಪಿ ಪಕ್ಷದ ರಾಜ್ಯಾಧ್ಯಕ್ಷರಾಗಿ ಅಧಿಕಾರವನ್ನು ವಹಿಸಿಕೊಂಡ ಬಿ ವೈ ವಿಜಯೇಂದ್ರ ಅವರನ್ನು ವಿಧಾನ ಪರಿಷತ್ ಸದಸ್ಯ ಪ್ರದೀಪ ಶೆಟ್ಟರ್ ಮಾಜಿ ಸಚಿವ ಶಂಕರ ಪಾಟೀಲ ಮುನೇನಕೊಪ್ಪ ಭೇಟಿಯಾಗಿ ಅಭಿನಂದನೆಗಳನ್ನು ಸಲ್ಲಿಸಿದರು.ಬೆಂಗಳೂರಿನಲ್ಲಿ ನೂತನ ರಾಜ್ಯಾಧ್ಯಕ್ಷರನ್ನು ಭೇಟಿ ಮಾಡಿದ ನಾಯಕರು ಹೂಗುಚ್ಚವನ್ನು ನೀಡಿ ಅಭಿನಂದನೆಗಳನ್ನು ಸಲ್ಲಿಸಿದರು.ಪ್ರದೀಪ ಶೆಟ್ಟರ್ ಅವರೊಂದಿಗೆ ಮಾಜಿ ಸಚಿವರಾದ ಶಂಕರ ಪಾಟೀಲ ಮುನೇನಕೊಪ್ಪ ಅವರು ಕೂಡಾ ಪಾಲ್ಗೊಂಡು ನೂತನ ರಾಜ್ಯಾಧ್ಯಕ್ಷರಿಗೆ ಅಭಿನಂದನೆಗಳನ್ನು ಸಲ್ಲಿಸಿ ಶುಭವನ್ನು ಹಾರೈಸಲಾಯಿತು.
ಉದಯ ವಾರ್ತೆ ಬೆಂಗಳೂರು