ಜುಲೈ.7ರಂದು ಮಹಾನಗರ ಪಾಲಿಕೆ ನೌಕರರ ಪ್ರತಿಭಟನೆ..ಎಲ್ಲಾ ಮಹಾನಗರ ಪಾಲಿಕೆಗಳ ನೌಕರರು ಪ್ರತಿಟನೆಗೆ ಬರಲು ಕರೆ.
ಹುಬ್ಬಳ್ಳಿ:- ನಗರಾಭಿವೃದ್ಧಿ ಇಲಾಖೆಯ ವಿರಿದ್ಧ ಅಸಮಾಧಾನಗೊಂಡಿರುವ ಮಹಾನಗರ ಪಾಲಿಕೆಯ ನೌಕರರು ಸಾಮೂಹಿಕ ರಜೆ ಹಾಕಿ ಪ್ರತಿಭಟನೆ ನಡೆಸಲು ಸಜ್ಜಾಗಿದ್ದಾರೆ.
ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಇದೇ ತಿಂಗಳು ಏಳರಂದು ರಾಜ್ಯದ ಹತ್ತೂ ಮಹಾನಗರ ಪಾಲಿಕೆಗಳ ನೌಕರರ ಸಂಘಗಳಿಂದ ಮುಷ್ಕರಕ್ಕೆ ಕರೆ ನೀಡಲಾಗಿದೆ.ಬೆಂಗಳೂರಿನ ಪ್ರೀಡಂ ಪಾಕ್೯ ಮೈದಾನದಲ್ಲಿ ಬೃಹತ್ ಪ್ರತಿಭಟನೆ ನಡೆಸಲಿದ್ದಾರೆ.
ಈ ಕುರಿತಂತೆ ಮಹಾನಗರ ಪಾಲಿಕೆಗಳ ನೌಕರರ ಸಂಘದ ಅದ್ಯಕ್ಷ ಅಮೃತ ರಾಜ್ ತುಮಕೂರಿನಲ್ಲಿ ಪತ್ರಿಕಾಗೋಷ್ಠಿ ನಡೆಸಿ ಹೇಳಿದ್ದಾರೆ. ರಾಜ್ಯದ ಹತ್ತೂ ಮಹಾನಗರ ಪಾಲಿಕೆಗಳ ನೌಕರರು ಸಾಮೂಹಿಕ ರಜೆ ಹಾಕಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವಂತೆ ಕರೆ ನೀಡಿದ್ದಾರೆ.
.…ಮಹಾನಗರ ಪಾಲಿಕೆಗಳ ನೌಕರರ ಬೇಡಿಕೆಗಳೇನು….?
ಸರಕಾರಿ ನೌಕರರಿಗೆ ನೀಡಲಾಗಿರುವ 7ನೇ ವೇತನ ಆಯೋಗದ ಸೌಲಬ್ಯ ನೀಡಲು ಪಾಲಿಕೆಗಳ ಸಿಬ್ಬಂದಿಗೂ ಆರ್ಥಿಕ ಇಲಾಖೆಯಿಂದಲೇ ಅನುದಾನ ಬಿಡುಗಡೆ ಮಾಡಬೇಕು.. ವೇತನ ತಾರತಮ್ಯ ನಿವಾರಣೆ.. ಸೇವಾ ಬದ್ರತೆ..ಖಾಲಿ ಹುದ್ದೆಗಳ ಭರ್ತಿ..ಆರೋಗ್ಯ ಸೌಲಬ್ಯ..ಸೇರಿದಂತೆ ಹಲವು ಬೇಡಿಕೆಗಳನ್ನಿಟ್ಟುಕೊಂಡು ಪ್ರತಿಭಟನೆ ನಡೆಯಲಿದೆ.