ಹುಬ್ಬಳ್ಳಿಯಲ್ಲಿ ರೈತರ ಬ್ರಹತ್ ಪ್ರತಿಭಟನೆ.ವಿವಿಧ ಬೇಡಿಕೆಗಳಿಗೆ ಒತ್ತಾಯ.
ಹುಬ್ಬಳ್ಳಿ:-ಹುಬ್ಬಳ್ಳಿಯ ರಾಣಿ ಚನ್ನಮ್ಮಾ ಮೈದಾನದಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಬೆಂಗಳೂರು ಸಂಯುಕ್ತ ಆಶ್ರಯದಲ್ಲಿ ಪ್ರತಿಭಟನೆ ಆರಂಭವಾಗಿದೆ.
ಧಾರವಾಡ ಜಿಲ್ಲೆಯ ವಿವಿಧ ಕಡೆಯಿಂದ ಆಗಮಿಸಿದ ಅನ್ನದಾತರು ರೈತರ ಸಾಲ ಮನ್ನಾ,ಮೂರು ಕ್ರಷಿ ಕಾಯ್ದೆ ವಾಪಾಸ್ಸು,ರಾಜ್ಯಾದ್ಯಂತ ಬರಗಾಲ ಸೇರಿದಂತೆ ನೀರಾವರಿ ಯೋಜನೆಗಳನ್ನು ಜಾರಿಗೊಳಿಸಬೇಕೆಂದು ಒತ್ತಾಯಿಸಿ ಧರಣಿ ಸತ್ಯಾಗ್ರಹ ಆರಂಭಗೊಂಡಿದೆ.
ಕಳೆದ ಹಲವು ತಿಂಗಳುಗಳಿಂದ ಶಾಂತವಾಗಿದ್ದ ಅನ್ನದಾತ ಮತ್ತೆ ಇಂದು ಸರಕಾರಗಳ ವಿರುದ್ಧ ಸಿಡಿದೆದ್ದು ತಮ್ಮ ಬೇಡಿಕೆ ಈಡೇರಿಕೆಗಾಗಿ ಒತ್ತಾಯಿಸಿದ್ದಾರೆ.
ಪ್ರತಿಭಟನೆಯಲ್ಲಿ ಜಿಲ್ಲೆಯ ಪ್ರಮುಖ ರೈತ ಮುಖಂಡರು ಭಾಗವಹಿಸಿದ್ದಾರೆ.
ಉದಯ ವಾರ್ತೆ ಹುಬ್ಬಳ್ಳಿ.