ಹುಬ್ಬಳ್ಳಿ:- ಹುಬ್ಬಳ್ಳಿಯ ಬೆಂಡಿಗೇರಿ ಪೋಲೀಸ ಠಾಣಾ ವ್ಯಾಪ್ತಿಯ ಮಂಟೂರ ರಸ್ತೆಯಲ್ಲಿ ಯುವಕನೊಬ್ಬನಿಗೆ ಹಳೇದ್ವೇಷದ ಹಿನ್ನೆಲೆಯಲ್ಲಿ ಚಾಕುವಿನಿಂದ ಇರಿದು ಕೊಲೆ ಮಾಡಲಾಗಿದೆ ಎನ್ನಲಾಗಿದೆ.
ಎರಡು ಟೀಮಿನ ನಡುವೆ ಇರುವ ಹಳೆಯ ದ್ವೇಷವೇ ಕೊಲೆಗೆ ಕಾರಣ ಎನ್ನಲಾಗಿದೆ.ಕೊಲೆಯಾದ ವ್ಯಕ್ತಿಯನ್ನು ಮಲ್ಲಿಕ್ ಎಂದು ಗುರುತಿಸಲಾಗಿದ್ದು. ಆರೋಪಿಗಳ ಪತ್ತೆಗೆ ಬೆಂಡಿಗೇರಿ ಪೋಲೀಸರು ಬಲೆ ಬೀಸಿದ್ದಾರೆ.