Share to all

ಕಾಂಗ್ರೆಸ್ ನ ಹಿರಿಯ ಶಾಸಕ ಶ್ಯಾಮನೂರು ಶಿವಶಂಕರಪ್ಪ ಇನ್ನಿಲ್ಲಾ.

ಬೆಂಗಳೂರು:-ರಾಜ್ಯದ ಕಾಂಗ್ರೆಸ್ ನ ದಾವಣಗೇರಿ ಮೂಲದ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ (95) ಅವರು ವಿಧಿವಶರಾಗಿದ್ದಾರೆ.

ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ ಎಂದು ಆಸ್ಪತ್ರೆಯ ಮೂಲಗಳು ಖಚಿತಪಡಿಸಿವೆ.ಉಸಿರಾಟದ ತೊಂದರೆಯಿಂದ ಅವರು ಬಳಲುತ್ತಿದ್ದರು ಎನ್ನಲಾಗಿದೆ.ಆ ಕಾರಣಕ್ಕಾಗಿ ಕಳೆದ ಒಂದು ತಿಂಗಳುಗಳಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.

95 ವರ್ಷದಲ್ಲೂ ಶಾಸಕರಾಗಿ ಗುರುತಿಸಿಕೊಂಡಿದ್ದ ಶಾಮನೂರು ಶಿವಶಂಕರಪ್ಪ ಇದೀಗ ಸಾವನ್ನಪ್ಪಿದ್ದಾರೆ.ಅವರ ಅಂತ್ಯಕ್ರಿಯೆ ಲಿಂಗಾಯತ ವಿಧಿವಿಧಾನದ ಮೂಲಕ ದಾವಣಗೇರಿಯಲ್ಲಿ ನಡೆಯಲಿದೆ.

ಉದಯ ವಾರ್ತೆ
ಬೆಂಗಳೂರು.


Share to all

You May Also Like

More From Author