ಹೊರವಲಯದಲ್ಲಿ ಬರ್ಬರ ಕೊಲೆ; ಶವ ಚೀಲದಲ್ಲಿ ಎಸೆದು ಪರಾರಿ, ಇಬ್ಬರು ಆರೋಪಿಗಳ ಬಂಧನ..!!
ಹುಬ್ಬಳ್ಳಿ: ನಗರದ ಹೊರವಲಯದ ಗದಗ ರಸ್ತೆಯಲ್ಲಿ ಯುವಕನ ಬರ್ಬರ ಕೊಲೆ ಮಾಡಿ, ಶವವನ್ನು ಚೀಲದಲ್ಲಿ ತುಂಬಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಎಸೆದು ಹೋದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಗ್ರಾಮೀಣ ಪೊಲೀಸರು ಬಂಧಿಸಿದ್ದಾರೆ.
ಬಂಡಿವಾಡ ಮೂಲದ 29 ವರ್ಷದ ಮಂಜುನಾಥ ಕೊಲೆಯಾದ ಯುವಕ. ವೃತ್ತಿಯಲ್ಲಿ ಪೇಂಟಿಂಗ್ ಕೆಲಸ ಮಾಡಿಕೊಂಡು ತನ್ನ ತಾಯಿಯೊಂದಿಗೆ ವಾಸವಾಗಿದ್ದ ಎಂದು ತಿಳಿದುಬಂದಿದೆ.
ವಿಠ್ಠಲ ಸಾವಳಗಿ ಮತ್ತು ಅಡಿವೆಪ್ಪ ಗಾಮನಗಟ್ಟಿ ಎಂಬವರ ಕೊಲೆ ಮಾಡಿದ ಆರೋಪಿಗಳು, ಇಬ್ಬರನ್ನೂ ಬಂಧಿಸಿ ವಿಚಾರಣೆ ನಡೆಸಲಾಗುತ್ತಿದೆ. ಬಂಡಿವಾಡ ಗ್ರಾಮದಲ್ಲಿ ಕಿರಾಣಿ ಅಂಗಡಿ ನಡೆಸುತ್ತಿದ್ದ ವಿಠ್ಠಲ ಮುಖ್ಯ ಆರೋಪಿಯೆಂದು ಹೇಳಲಾಗಿದೆ.
ಕೊಲೆಗೆ ನಿಖರ ಕಾರಣ ಇನ್ನೂ ತಿಳಿದುಬರಬೇಕಿದ್ದು, ಆರೋಪಿಗಳನ್ನು ವಿಚಾರಣೆ ನಡೆಸಲಾಗುತ್ತಿದೆ. ಹುಬ್ಬಳ್ಳಿ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.