ಧಾರವಾಡ ಬೈಪಾಸನಲ್ಲಿ ಕಾರಿಗೆ ಬೆಂಕಿ…ಕಾರಿನಲ್ಲಿದ್ದವರು ಬಚಾವ್…

Share to all

ಧಾರವಾಡ ಬೈಪಾಸನಲ್ಲಿ ಕಾರಿಗೆ ಬೆಂಕಿ…ಕಾರಿನಲ್ಲಿದ್ದವರು ಬಚಾವ್…

ಧಾರವಾಡ: ಧಾರವಾಡ ಬೈಪಾಸ್ ರಸ್ತೆಯಲ್ಲಿ ತಾಂತ್ರಿಕ ದೋಷದಿಂದಾಗಿ ಚಲಿಸುತ್ತಿದ್ದ ಕಾರೊಂದರಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು, ಕಾರು ಸಂಪೂರ್ಣ ಸುಟ್ಟು ಭಸ್ಮವಾದ ಘಟನೆ ನಡೆದಿದೆ. ಅದೃಷ್ಟವಶಾತ್ ಕಾರಿನಲ್ಲಿದ್ದ ಪ್ರಯಾಣಿಕರು ಸಮಯಪ್ರಜ್ಞೆ ಮೆರೆದು ತಕ್ಷಣ ಕೆಳಗಿಳಿದಿದ್ದರಿಂದ ದೊಡ್ಡ ಅನಾಹುತವೊಂದು ತಪ್ಪಿದಂತಾಗಿದೆ.

​ಹುಬ್ಬಳ್ಳಿ ಕಡೆಯಿಂದ ಬೆಳಗಾವಿ ಕಡೆಗೆ ತೆರಳುತ್ತಿದ್ದ ಕಾರು ಧಾರವಾಡ ಬೈಪಾಸ್ ಸಮೀಪಿಸುತ್ತಿದ್ದಂತೆ ಇಂಜಿನ್‌ನಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡಿದೆ. ಈ ವೇಳೆ ಇಂಜಿನ್‌ನಿಂದ ಹೊಗೆ ಬರುತ್ತಿರುವುದನ್ನು ಗಮನಿಸಿದ ಚಾಲಕ ಕೂಡಲೇ ರಸ್ತೆ ಬದಿಗೆ ಕಾರನ್ನು ನಿಲ್ಲಿಸಿದ್ದಾರೆ. ಪ್ರಯಾಣಿಕರು ಕೆಳಗಿಳಿಯುತ್ತಿದ್ದಂತೆಯೇ ಬೆಂಕಿ ಇಡೀ ಕಾರನ್ನು ಆವರಿಸಿಕೊಂಡಿದೆ.

ಉದಯ ವಾರ್ತೆ
ಧಾರವಾಡ.


Share to all

You May Also Like

More From Author