ಕೊಲೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆ ಹಿನ್ನೆಲೆ…ವಿನಯ ಕುಲಕರ್ಣಿ ಶಾಸಕ ಸ್ಥಾನ ರದ್ದು..6 ತಿಂಗಳೊಳಗಾಗೆ ಚುನಾವಣೆ..
ಧಾರವಾಡ:- ಧಾರವಾಡ ಜಿಲ್ಲಾ ಪಂಚಾಯತ ಸದಸ್ಯ ಯೋಗೀಶಗೌಡ ಕೊಲೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾದ ಹಿನ್ನೆಲೆಯಲ್ಲಿ ವಿನಯ ಕುಲಕರ್ಣಿ ಶಾಸಕ ಸ್ಥಾನ ಕಳೆದುಕೊಂಡಿದ್ದಾರೆ.ಅವರ ಶಾಸಕ ಸ್ಥಾನ ರದ್ದುಗೊಳಿಸಿ ವಿಧಾನಸಭೆಯ ಸಚಿವಾಲಯದ ಕಾರ್ಯದರ್ಶಿ ವಿಶಾಲಾಕ್ಷಿ ಆದೇಶ ಹೊರಡಿಸಿದ್ದಾರೆ.
ಜನಪ್ರತಿನಿಧಿ ಕಾಯ್ದೆ 1951 ರ ಸೆಕ್ಷನ್ ಪ್ರಕಾರ ಜನಪ್ರತಿನಿಧಿಯೊಬ್ಬರು ಎರಡು ವರ್ಷಕ್ಕಿಂತ ಅಧಿಕ ಅವಧಿಗೆ ಜೈಲು ಶಿಕ್ಷೆಗೆ ಗುರಿಯಾದಲ್ಲಿ ಶಾಸಕ ಸ್ಥಾನ ಕಳೆದುಕೊಳ್ಲಲಿದ್ದಾರೆ.
ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ತೀರ್ಪಿಗೆ ತಡೆ ನೀಡುವಂತೆ ವಿನಯ ಕುಲಕರ್ಣಿ ಹೈಕೋರ್ಟಗೆ ಮೇಲ್ಮನವಿ ಸಲ್ಲಿಸಿದ್ದಾರೆ.ನ್ಯಾಯಾಲಯ ತಡೆಯಾಜ್ಞೆ ನೀಡಿದರೆ ಮಾತ್ರ ಶಾಸಕ ಸ್ಥಾನ ಉಳಿಯಲಿದೆ.
ವಿಧಾನಸಭೆಯ ಪ್ರಕಟಣೆಯಿಂದ ಧಾರವಾಡ ವಿಧಾನಸಭಾ ಕ್ಷೇತ್ರದ ಶಾಸಕ ಸ್ಥಾನ ಖಾಲಿಯಾಗಿದ್ದು ಆರು ತಿಂಗಳೊಳಗಾಗಿ ಚುನಾವಣೆ ನಡೆಯಬೇಕಿದೆ.