ಧಾರವಾಡ:- ಶಾಸಕ ವಿನಯ ಕುಲಕರ್ಣಿಗೆ ಧಾರವಾಡಕ್ಕೆ ಹೋಗಲು ಅನುಮತಿ…ಜೊತೆಗೆ ಷರತ್ತುಗಳನ್ನು ವಿಧಿಸಿದ ಕೋರ್ಟ್; ಯಾಮಾರಿದ್ರೆ ಜಾಮೀನು ರದ್ದು ಅಂತಾ ಹೇಳಿದೆ.
ಯೋಗೀಶ್ ಗೌಡ ಕೊಲೆ ಪ್ರಕರಣದ ಆರೋಪಿಯಾಗಿರುವ ಕಾಂಗ್ರೆಸ್ ಶಾಸಕ ವಿನಯ ಕುಲಕರ್ಣಿ ಅವರಿಗೆ ಧಾರವಾಡ ಪ್ರವೇಶಿಸಲು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಷರತ್ತುಬದ್ಧ ಅನುಮತಿ ನೀಡಿದೆ. ಸಾಕ್ಷಿಗಳಿಗೆ ಬೆದರಿಕೆ ಹಾಕದಂತೆ ಹಾಗೂ ಯಾವುದೇ ಮೆರವಣಿಗೆ ಅಥವಾ ಸಾರ್ವಜನಿಕ ಸಭೆ ನಡೆಸದೆ ಶಾಂತಿ ಕಾಪಾಡುವಂತೆ ಸೂಚಿಸಲಾಗಿದೆ. ಒಂದು ವೇಳೆ ಷರತ್ತುಗಳನ್ನು ಉಲ್ಲಂಘಿಸಿದರೆ ಜಾಮೀನು ರದ್ದುಪಡಿಸಲು ಪ್ರಾಸಿಕ್ಯೂಶನ್ಗೆ ಅವಕಾಶವಿದೆ ಎಂದು ನ್ಯಾಯಾಲಯ ಸ್ಪಷ್ಟಪಡಿಸಿದೆ.
ಜಿಲ್ಲಾ ಪಂಚಾಯತಿ ಸದಸ್ಯ ಯೋಗೀಶ್ ಗೌಡ ಕೊಲೆ ಪ್ರಕರಣದ ಆರೋಪಿ, ಕಾಂಗ್ರೆಸ್ ಶಾಸಕ ವಿನಯ ಕುಲಕರ್ಣಿ ಅವರಿಗೆ ಧಾರವಾಡ ಪ್ರವೇಶಿಸಲು ಷರತ್ತುಬದ್ಧ ಅನುಮತಿ ನೀಡಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಆದೇಶಿಸಿದೆ.
ಧಾರವಾಡ ಪ್ರವೇಶಕ್ಕೆ ಅನುಮತಿ ಕೋರಿ ಶಾಸಕ ವಿನಯ ಕುಲಕರ್ಣಿ ನ್ಯಾಯಾಲಯದ ಮುಂದೆ ಅರ್ಜಿ ಸಲ್ಲಿಸಿದ್ದರು. ನ್ಯಾಯಾಲಯ, ‘ಧಾರವಾಡ ಪ್ರವೇಶದ ಬಳಿಕ ಪ್ರಕರಣದ ಸಾಕ್ಷಿಗಳನ್ನು ಸಂಪರ್ಕಿಸುವುದು, ಅವರಿಗೆ ಬೆದರಿಕೆ ಹಾಕುವುದು ಅಥವಾ ಪ್ರಭಾವ ಬೀರುವುದಕ್ಕೆ ಮುಂದಾಗಬಾರದು. ಈ ಸಂದರ್ಭದಲ್ಲಿ ಬೆಂಬಲಿಗರಿಂದ ಮೆರವಣಿಗೆ, ಸಾರ್ವಜನಿಕ ಸಭೆ ನಡೆಸಬಾರದು, ಸಾರ್ವಜನಿಕ ಶಾಂತಿ, ಸಂಚಾರ ಅಥವಾ ಜನಜೀವನಕ್ಕೆ ಅಡ್ಡಿಯಾಗದಂತೆ ಕ್ರಮ ವಹಿಸಬೇಕು’ ಎಂಬ ಷರತ್ತುಗಳನ್ನು ವಿಧಿಸಿ ಅನುಮತಿ ನೀಡಿದೆ.
ಕೋರ್ಟ್ ಆದೇಶ ಪ್ರತಿ ವಿಧಾನಸಭೆ ಸಚಿವಾಲಯಕ್ಕೆ ಸಲ್ಲಿಕೆ ಆಗುತ್ತಿದ್ದಂತೆಯೇ ವಿನಯ ಶಾಸಕತ್ವ ಮರುಸ್ಥಾಪನೆಯಾಗುವುದರಿಂದ ಅವರೇ ಶಾಸಕರಾಗಿ ಮುಂದುವರಿದಿದ್ದು. ಹೀಗಾಗಿ ಹೈಕೋರ್ಟ್ನ ಈ ತೀರ್ಪು ವಿನಯ ಬೆಂಬಲಿಗರ ಸಂತಸ ಇಮ್ಮಡಿಗೊಳಿಸಿತ್ತು. ಉಪಚುನಾವಣೆಗೆ ಬಿಜೆಪಿ, ಕಾಂಗ್ರೆಸ್ ಸಜ್ಜುಗೊಂಡಿದ್ದವು. ಹಲವರು ಉಭಯ ಪಕ್ಷಗಳ ಟಿಕೆಟ್ ಮೇಲೆ ಕಣ್ಣಿಟ್ಟು ರಕ್ತದಾನ ಶಿಬಿರ, ಜನ್ಮದಿನದ ಸಂಭ್ರಮ ಆಚರಿಸಿಕೊಳ್ಳುತ್ತಿದ್ದರು. ಬಿಜೆಪಿಯಲ್ಲಂತೂ ಆಕಾಂಕ್ಷಿಗಳ ದಂಡೇ ಹುಟ್ಟಿಕೊಂಡಿತ್ತು. ಕೆಲ ಕಾಂಗ್ರೆಸ್ ನಾಯಕರೂ ಚುನಾವಣೆ ಸಿದ್ಧತೆಯಲ್ಲಿತೊಡಗಿದ್ದರು. ಬೂತ್ ಮಟ್ಟದಲ್ಲಿಸಭೆಗಳನ್ನು ನಡೆಸಲಾಗುತ್ತಿತ್ತು. ಆದರೆ, ಈಗ ಉಪಚುನಾವಣೆ ನಡೆಯುವುದು ಅನುಮಾನವಾಗಿದ್ದರಿಂದ ಈ ಆಕಾಂಕ್ಷಿಗಳಲ್ಲಿ ನಿರಾಸೆ ಮೂಡಿದೆ.