ಕೇಂದ್ರ ಸಚಿವ ಪ್ರಹ್ಲಾದ್ ಜೋಶಿಯವರಿಗೆ ಹುಟ್ಟು ಹಬ್ಬದ ಶುಭಾಶಯ ಕೋರಿದ ಪ್ರಧಾನಿ ನರೇಂದ್ರ ಮೊದಿ – ನಿಮ್ಮ ಜೊತೆಯಲ್ಲಿ ರಾಷ್ಟ್ರ ಸೇವೆ ಮಾಡುವ ಅವಕಾಶ ದೊರೆತಿರುವುದು ನನ್ನ ಸೌಭಾಗ್ಯ ಎನ್ನುತ್ತಾ ಧನ್ಯವಾದಗಳನ್ನು ಹೇಳಿದ ಸಚಿವರು
ಹುಬ್ಬಳ್ಳಿ –
ಕೇಂದ್ರ ಸಚಿವ ಪ್ರಹ್ಲಾದ್ ಜೋಶಿಯವರಿಗೆ ಇಂದು 62ನೇ ಹುಟ್ಟು ಹಬ್ಬದ ಸಂಭ್ರಮ.ಹುಟ್ಟು ಹಬ್ಬದ ಆಚರಣೆಯಲ್ಲಿರುವ ಕೇಂದ್ರ ಸರ್ಕಾರದ ಸಚಿವ ಸಂಪುಟದ ತಮ್ಮ ಸಹೋದ್ಯೋಗಿಗೆ ಪ್ರಧಾನಿ ನರೇಂದ್ರ ಮೋದಿ ಯವರು ಶುಭಾಶಯಗಳನ್ನು ಕೋರಿದ್ದಾರೆ.
ಹೌದು ಸಾಮಾಜಿಕ ಜಾಲ ತಾಣಗಳಲ್ಲಿ ತಮ್ಮ ಖಾತೆಯಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿಯವರಿಗೆ ಪ್ರಧಾನಿ ಯವರು ಶುಭಾಶಯಗಳನ್ನು ಕೋರಿದ್ದು ಇನ್ನೂ ಇತ್ತ ಜನ್ಮದಿನಕ್ಕೆ ಶುಭಾಶಯಗಳನ್ನು ತಿಳಿಸಿದ ಪ್ರಧಾನಮಂತ್ರಿ ಯವರಿಗೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿಯವರು ಅನಂತಾನಂತ ಧನ್ಯವಾದಗಳನ್ನು ತಿಳಿಸಿ.ನಿಮ್ಮ ಮಾರ್ಗದರ್ಶನದಲ್ಲಿ ನಿಮ್ಮ ಜೊತೆಗೂಡಿ ರಾಷ್ಟ್ರ ಸೇವೆ ಮಾಡುವ ಅವಕಾಶ ದೊರೆತಿರುವುದು ನನ್ನ ಸೌಭಾಗ್ಯ ಎಂದಿದ್ದಾರೆ.
ಉದಯ ವಾರ್ತೆ ಹುಬ್ಬಳ್ಳಿ