ಹುಬ್ಬಳ್ಳಿಯಲ್ಲಿ ಮತ್ತೆ ಮಾಂಜಾ ದಾರದ ಹಾವಳಿ: ಬೈಕ್ ಸವಾರನಿಗೆ ಗಾಯ

Share to all

ಹುಬ್ಬಳ್ಳಿಯಲ್ಲಿ ಮತ್ತೆ ಮಾಂಜಾ ದಾರದ ಹಾವಳಿ: ಬೈಕ್ ಸವಾರನಿಗೆ ಗಾಯ

ಹುಬ್ಬಳ್ಳಿ: ನಗರದಲ್ಲಿ ಅಪಾಯಕಾರಿ ಮಾಂಜಾ ದಾರದ ಹಾವಳಿ ಮುಂದುವರಿದಿದ್ದು, ಮತ್ತೊಂದು ಅನಾಹುತ ಸಂಭವಿಸಿದೆ. ಉಣಕಲ್ ಬಿಆರ್‌ಟಿಎಸ್ ಬಳಿ ಬೈಕ್‌ನಲ್ಲಿ ತೆರಳುತ್ತಿದ್ದ ಯುವಕನಿಗೆ ಮಾಂಜಾ ದಾರ ತಗುಲಿ ಗಾಯಗೊಂಡಿರುವ ಘಟನೆ ನಡೆದಿದೆ.
ಬೈಕ್ ಸವಾರನ ಮೂಗಿಗೆ ಮಾಂಜಾ ದಾರ ತಗುಲಿದ್ದು, ರಕ್ತಸ್ರಾವವಾಗಿದೆ. ಅದೃಷ್ಟವಶಾತ್ ದಾರ ಕುತ್ತಿಗೆಗೆ ತಾಗದೆ ಕೂದಲೆಳೆಯ ಅಂತರದಲ್ಲಿ ಯುವಕ ಪ್ರಾಣಾಪಾಯದಿಂದ ಪಾರಾಗಿದ್ದಾನೆ.

ಗಾಯಗೊಂಡ ಯುವಕನನ್ನು ಚಿಕಿತ್ಸೆಗಾಗಿ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಇತ್ತೀಚೆಗಷ್ಟೇ ಮಾಂಜಾ ದಾರಕ್ಕೆ ಮಹಿಳೆಯೊಬ್ಬರು ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು ಘಟನೆ ನಡೆದಿರುವುದು ಸಾರ್ವಜನಿಕರಲ್ಲಿ ಆತಂಕಕ್ಕೆ ಕಾರಣವಾಗಿದೆ.

ಮಾಂಜಾ ದಾರ ಬಳಸದಂತೆ ಪೊಲೀಸ್ ಆಯುಕ್ತರು ಕಟ್ಟುನಿಟ್ಟಿನ ಎಚ್ಚರಿಕೆ ನೀಡಿದ್ದರೂ, ನಿಯಮ ಉಲ್ಲಂಘಿಸಿ ನಿಷೇಧಿತ ಮಾಂಜಾ ದಾರ ಬಳಕೆ ಮಾಡಲಾಗುತ್ತಿದೆ ಎಂಬ ಆರೋಪ ಕೇಳಿಬಂದಿದೆ.
ಅಪಾಯಕಾರಿ ಮಾಂಜಾ ದಾರದಿಂದ ವಾಹನ ಸವಾರರು, ಪಾದಚಾರಿಗಳು ಹಾಗೂ ಸಾರ್ವಜನಿಕರಿಗೆ ಅಪಾಯ ಎದುರಾಗುತ್ತಿರುವ ಹಿನ್ನೆಲೆಯಲ್ಲಿ, ನಿಷೇಧಿತ ಮಾಂಜಾ ದಾರದ ಮಾರಾಟ ಮತ್ತು ಬಳಕೆಯನ್ನು ಸಂಪೂರ್ಣವಾಗಿ ತಡೆಯಲು ಪೊಲೀಸರು ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.

ನಿಷೇಧದ ನಡುವೆಯೂ ಮಾಂಜಾ ದಾರದ ಬಳಕೆ ಮುಂದುವರಿದಿರುವುದು ಏಕೆ? ನಿಯಮ ಉಲ್ಲಂಘಿಸುವವರ ವಿರುದ್ಧ ಪೊಲೀಸ್ ಇಲಾಖೆ ಯಾವ ಕ್ರಮ ಕೈಗೊಳ್ಳಲಿದೆ ಎಂಬುದು ಇದೀಗ ಪ್ರಶ್ನೆಯಾಗಿದೆ.

ಉದಯ ವಾರ್ತೆ.


Share to all

You May Also Like

More From Author