ಧಾರವಾಡದಲ್ಲಿ ಮತ್ತೊಬ್ಬ ಸರ್ಕಾರಿ ನೌಕರ ಆತ್ಮಹತ್ಯೆ..

Share to all

ಕಲಘಟಗಿಯ ಅರಣ್ಯ ಅಧಿಕಾರಿ ಧಾರವಾಡದಲ್ಲಿ ಆತ್ಮಹತ್ಯೆ..

ಧಾರವಾಡ: ಧಾರವಾಡದಲ್ಲಿ ಮತ್ತೊಬ್ಬ ಸರ್ಕಾರಿ ನೌಕರ ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ. ಅರಣ್ಯ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ವಿಠ್ಠಲ ಜೋನಿ (38) ಮೃತಪಟ್ಟಿರುವುದಾಗಿ ತಿಳಿದುಬಂದಿದೆ.

ನಗರದ ಕುಮಾರೇಶ್ವರ ಬಡಾವಣೆಯಲ್ಲಿರುವ ಮನೆಯಲ್ಲಿ ಘಟನೆ ನಡೆದಿದೆ. ವಿಠ್ಠಲ ಜೋನಿ ಅವರು ಕಲಘಟಗಿ ವಿಭಾಗದ ಅರಣ್ಯ ಪಾಲಕರಾಗಿ ಕಾರ್ಯನಿರ್ವಹಿಸುತ್ತಿದ್ದರು ಎನ್ನಲಾಗಿದೆ.
ಮನೆಯಲ್ಲೇ ಆತ್ಮಹತ್ಯೆ ಮಾಡಿಕೊಂಡಿರುವುದು ಬೆಳಕಿಗೆ ಬಂದಿದ್ದು, ಘಟನೆಯ ಮಾಹಿತಿ ತಿಳಿದು ಧಾರವಾಡ ಉಪನಗರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ವಿಠ್ಠಲ ಜೋನಿ ಅವರ ಆತ್ಮಹತ್ಯೆಗೆ ನಿಖರ ಕಾರಣವೇನು ಎಂಬುದು ಇನ್ನೂ ತಿಳಿದುಬಂದಿಲ್ಲ. ಈ ಕುರಿತು ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

ಉದಯ ವಾರ್ತೆ
ಧಾರವಾಡ


Share to all

You May Also Like

More From Author