ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಗೆ ಬಾಂಬ್ ಬೆದರಿಕೆ ಮೇಲ್! ಹಬ್ಬದ ಸಂಭ್ರಮದ ನಡುವೆ ಆತಂಕ. ಸಾರ್ವಜನಿಕರಲ್ಲಿ ಭಯದ ವಾತಾವರಣ.

Share to all

ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಗೆ ಬಾಂಬ್ ಬೆದರಿಕೆ ಮೇಲ್!
ಹಬ್ಬದ ಸಂಭ್ರಮದ ನಡುವೆ ಆತಂಕ.
ಸಾರ್ವಜನಿಕರಲ್ಲಿ ಭಯದ ವಾತಾವರಣ.

ಹುಬ್ಬಳ್ಳಿ: ಹಬ್ಬದ ಸಂಭ್ರಮದಲ್ಲಿದ್ದ ಹುಬ್ಬಳ್ಳಿ-ಧಾರವಾಡ ಜನತೆಗೆ ಬಾಂಬ್ ಬೆದರಿಕೆ ಮೇಲ್ ಆತಂಕ ಮೂಡಿಸಿದೆ. ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಆಯುಕ್ತರಿಗೆ ಇಂದು ಬೆಳಿಗ್ಗೆ 11:35ರ ಸುಮಾರಿಗೆ ಇ-ಮೇಲ್ ಮೂಲಕ ಬಾಂಬ್ ಸ್ಫೋಟದ ಬೆದರಿಕೆ ಸಂದೇಶ ರವಾನೆಯಾಗಿದೆ.

‘ವೆಯಿಟ್ ಸ್ಮಿತ್’ (Wei Smith) ಎಂಬ ಹೆಸರಿನಲ್ಲಿ ಬಂದಿರುವ ಈ ಮೇಲ್‌ನಲ್ಲಿ ಖಲಿಸ್ತಾನ್ ಪರ ಘೋಷಣೆಗಳ ಜೊತೆಗೆ ಹಲವು ಗಂಭೀರ ಬೆದರಿಕೆಗಳನ್ನು ಉಲ್ಲೇಖಿಸಲಾಗಿದೆ ಎಂದು ತಿಳಿದುಬಂದಿದೆ.
ಮೇಲ್‌ನಲ್ಲಿ ನವೆಂಬರ್ 29ರಂದು ಬೆಂಗಳೂರಿನ NICE ಸೆಂಟರ್ ಸ್ಟೇಜ್‌ನಲ್ಲಿ ನಡೆಯಲಿರುವ ದಲ್ಜಿತ್ ದೋಸಾಂಜ್ ಅವರ ಕಾರ್ಯಕ್ರಮದ ಸ್ಥಳದಲ್ಲಿ ಸ್ಫೋಟ ನಡೆಸುವುದಾಗಿ ಬೆದರಿಕೆ ಹಾಕಲಾಗಿದೆ.

ಅಲ್ಲದೆ, ನವೆಂಬರ್ 27ರಂದು ಬಾಲಿವುಡ್ ನಟ ಅಮಿತಾಭ್ ಬಚ್ಚನ್ ಅವರ ಮನೆ ಸಮೀಪ ಸ್ಫೋಟದ ಬೆದರಿಕೆಯನ್ನೂ ಉಲ್ಲೇಖಿಸಲಾಗಿದೆ.
ಇದರೊಂದಿಗೆ ಮೆಟ್ರೋ ನಿಲ್ದಾಣದಲ್ಲಿ ಸ್ಫೋಟಕ ಇರಿಸಿರುವುದಾಗಿ ಹಾಗೂ ನವೆಂಬರ್ 29ರಂದು ಮೆಟ್ರೋದಲ್ಲಿ ಪ್ರಯಾಣಿಸದಂತೆ ಎಚ್ಚರಿಕೆ ನೀಡಿರುವುದಾಗಿ ವರದಿಯಾಗಿದೆ.

ಉದಯ ವಾರ್ತೆ
ಹುಬ್ಬಳ್ಳಿ.


Share to all

You May Also Like

More From Author