ಹುಬ್ಬಳ್ಳಿ-ಧಾರವಾಡದಲ್ಲಿ ಜೂಜಾಟದ ಅಡ್ಡೆಗಳ ಮೇಲೆ ಪೊಲೀಸರ ಭರ್ಜರಿ ದಾಳಿ! 14 ಪ್ರತ್ಯೇಕ ಪ್ರಕರಣ ದಾಖಲು, 91 ಜನರ ವಿರುದ್ಧ ದೂರು!.

Share to all

ಹುಬ್ಬಳ್ಳಿ-ಧಾರವಾಡದಲ್ಲಿ ಜೂಜಾಟದ ಅಡ್ಡೆಗಳ ಮೇಲೆ ಪೊಲೀಸರ ಭರ್ಜರಿ ದಾಳಿ!
14 ಪ್ರತ್ಯೇಕ ಪ್ರಕರಣ ದಾಖಲು, 91 ಜನರ ವಿರುದ್ಧ ದೂರು!.

ಹುಬ್ಬಳ್ಳಿ: ದೀಪಾವಳಿ ಹಬ್ಬದ ಹಿನ್ನೆಲೆಯಲ್ಲಿ ಹುಬ್ಬಳ್ಳಿ-ಧಾರವಾಡ ಅವಳಿ ನಗರದಲ್ಲಿ ನಡೆಯುತ್ತಿದ್ದ ಜೂಜಾಟಕ್ಕೆ ಕಡಿವಾಣ ಹಾಕಲು ಪೊಲೀಸ್ ಇಲಾಖೆ ವಿಶೇಷ ಕಾರ್ಯಾಚರಣೆ ನಡೆಸಿದೆ.
ನಗರದ ವಿವಿಧ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ಏಕಕಾಲಕ್ಕೆ ದಾಳಿ ನಡೆಸಿರುವ ಪೊಲೀಸರು, ಒಟ್ಟು 14 ಪ್ರತ್ಯೇಕ ಪ್ರಕರಣಗಳನ್ನು ದಾಖಲಿಸಿಕೊಂಡಿದ್ದಾರೆ.

ಈ ಪ್ರಕರಣಗಳಲ್ಲಿ 91 ಜನರ ವಿರುದ್ಧ ದೂರು ದಾಖಲಾಗಿದೆ.
ಹುಬ್ಬಳ್ಳಿಯ ಎಪಿಎಂಸಿ, ಕೇಶ್ವಾಪುರ, ಹಳೇಹುಬ್ಬಳ್ಳಿ, ಉಪನಗರ ಸೇರಿದಂತೆ ಧಾರವಾಡದ ಮೂರು ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ಪೊಲೀಸರು ದಾಳಿ ನಡೆಸಿದ್ದಾರೆ.
ದೀಪಾವಳಿ ಹಬ್ಬದ ಸಂದರ್ಭದಲ್ಲಿ ಜೂಜಾಟ ಹೆಚ್ಚಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ಪೊಲೀಸ್ ಕಮಿಷನರ್ ಅವರು ವಿಶೇಷ ತಂಡಗಳನ್ನು ರಚಿಸಿ ಕಾರ್ಯಾಚರಣೆಗೆ ಸೂಚನೆ ನೀಡಿದ್ದರು.

ಹುಬ್ಬಳ್ಳಿ-ಧಾರವಾಡದ ಏಳು ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ವಿಶೇಷ ಕಾರ್ಯಾಚರಣೆ ನಡೆಸಿ ಜೂಜಾಟದಲ್ಲಿ ತೊಡಗಿದ್ದವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗಿದೆ.
ಹಬ್ಬದ ಹೆಸರಿನಲ್ಲಿ ಜೂಜಾಟ ನಡೆಸುವವರಿಗೆ ಪೊಲೀಸ್ ಇಲಾಖೆ ಖಡಕ್ ಎಚ್ಚರಿಕೆ ನೀಡಿದೆ.

ಉದಯ ವಾರ್ತೆ
ಹುಬ್ಬಳ್ಳಿ


Share to all

You May Also Like

More From Author