ಹುಬ್ಬಳ್ಳಿ ಜೈನ ಮಂದಿರ ಕಳ್ಳತನ ಪ್ರಕರಣ ಭೇದಿಸಿದ ಬೆಂಡಿಗೇರಿ ಪೊಲೀಸರು! ಹತ್ತು ದಿನ, ಎರಡು ರಾಜ್ಯಗಳ ಸುತ್ತಾಟ… ಗುಜರಾತ್ ಮತ್ತು ರಾಜಸ್ಥಾನದಲ್ಲಿ ಅಡಗಿದ್ದ ಇಬ್ಬರು ಖತರ್ನಾಕ್ ಕಳ್ಳರ ಬಂಧನ!
ಹುಬ್ಬಳ್ಳಿ ಜೈನ ಮಂದಿರ ಕಳ್ಳತನ ಪ್ರಕರಣ ಭೇದಿಸಿದ ಬೆಂಡಿಗೇರಿ ಪೊಲೀಸರು! ಹತ್ತು ದಿನ, ಎರಡು ರಾಜ್ಯಗಳ ಸುತ್ತಾಟ… ಗುಜರಾತ್ ಮತ್ತು ರಾಜಸ್ಥಾನದಲ್ಲಿ ಅಡಗಿದ್ದ ಇಬ್ಬರು ಖತರ್ನಾಕ್ ಕಳ್ಳರ ಬಂಧನ!
ಹುಬ್ಬಳ್ಳಿ:
ಹುಬ್ಬಳ್ಳಿಯ ಗಬ್ಬೂರು ಕ್ರಾಸ್ ಬಳಿ ಇರುವ ಜೈನ ಮಂದಿರದಲ್ಲಿ ನಡೆದಿದ್ದ ಕಳ್ಳತನ ಪ್ರಕರಣವನ್ನು ಬೆಂಡಿಗೇರಿ ಪೊಲೀಸರು ಭೇದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬರೋಬ್ಬರಿ ಹತ್ತು ದಿನಗಳ ಕಾಲ ಎರಡು ರಾಜ್ಯಗಳಲ್ಲಿ ಕಾರ್ಯಾಚರಣೆ ನಡೆಸಿದ ಪೊಲೀಸರು, ಗುಜರಾತ್ ಹಾಗೂ ರಾಜಸ್ಥಾನದಲ್ಲಿ ಅಡಗಿದ್ದ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.
ಕಳೆದ ಎರಡು ತಿಂಗಳ ಹಿಂದೆ ಗಬ್ಬೂರು ಕ್ರಾಸ್ನಲ್ಲಿರುವ ಜೈನ ಮಂದಿರಕ್ಕೆ ಕಳ್ಳರು ಕನ್ನ ಹಾಕಿದ್ದರು. ಮಂದಿರದಲ್ಲಿದ್ದ ಬೆಳ್ಳಿಯ ಆಭರಣಗಳನ್ನು ಕದ್ದು ಪರಾರಿಯಾಗಿದ್ದರು. ಕಳ್ಳತನದ ಬಳಿಕ ಆರೋಪಿಗಳು ಖುಷಿಯಿಂದ ಡ್ಯಾನ್ಸ್ ಮಾಡಿದ್ದ ದೃಶ್ಯಗಳು ಕೂಡ ಪ್ರಕರಣದ ಕುತೂಹಲ ಹೆಚ್ಚಿಸಿದ್ದವು.
ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಬೆಂಡಿಗೇರಿ ಪೊಲೀಸರು ಆರೋಪಿಗಳ ಪತ್ತೆಗೆ ವಿಶೇಷ ಕಾರ್ಯಾಚರಣೆ ಕೈಗೊಂಡಿದ್ದರು. ಹತ್ತು ದಿನಗಳ ಕಾಲ ಗುಜರಾತ್ ಹಾಗೂ ರಾಜಸ್ಥಾನ ರಾಜ್ಯಗಳಲ್ಲಿ ಸುತ್ತಾಡಿ, ಕೊನೆಗೂ ಇಬ್ಬರು ಆರೋಪಿಗಳನ್ನು ಹೆಡೆಮುರಿ ಕಟ್ಟುವಲ್ಲಿ ಯಶಸ್ವಿಯಾಗಿದ್ದಾರೆ.
ಎಸಿಪಿ ಚಿಕ್ಕಮಠ ಅವರ ಮಾರ್ಗದರ್ಶನದಲ್ಲಿ, ಇನ್ಸ್ಪೆಕ್ಟರ್ ಎಸ್.ಆರ್. ನಾಯಕ್ ನೇತೃತ್ವದಲ್ಲಿ ಪಿಎಸ್ಐ ರವಿ ವಡ್ಡರ್ ಹಾಗೂ ಪೊಲೀಸ್ ಸಿಬ್ಬಂದಿಗಳಾದ ಹನುಮಂತ. ಕೆ
ಚಂದ್ರು. ಎಲ್ ..ಬಸು.ಜಿ ಅಮರ್. ಕೆ ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದರು.
ಒಟ್ಟಿನಲ್ಲಿ, ಎರಡು ತಿಂಗಳ ಹಿಂದೆ ನಡೆದಿದ್ದ ಜೈನ ಮಂದಿರ ಕಳ್ಳತನ ಪ್ರಕರಣಕ್ಕೆ ಬೆಂಡಿಗೇರಿ ಪೊಲೀಸರು ತೆರೆ ಎಳೆದಿದ್ದು, ಆರೋಪಿಗಳನ್ನು ಬಂಧಿಸುವ ಮೂಲಕ ಕಳ್ಳರಿಗೆ ಖಡಕ್ ಎಚ್ಚರಿಕೆ ನೀಡಿದ್ದಾರೆ. ಉಳಿದ ಆರೋಪಿಗಳಿಗಾಗಿ ಜಾಲ ಬೀಸಿದ್ದಾರೆ..