ವಿಜಯಪುರ ಮೆಕ್ಕೆಜೋಳ ಮೂಟೆ ತುಂಬುವ ಯಂತ್ರ ಕುಸಿದು 7 ಕಾರ್ಮಿಕರ ಸಾವು.
ಅಗತ್ಯ ಮುನ್ನೆಚ್ಚರಿಕೆ ವಹಿಸಲು ಕಾರ್ಮಿಕ ಸಚಿವ ಸಂತೋಷ್ ಲಾಡ್ ಸೂಚನೆ
ಬೆಳಗಾವಿ:- ವಿಜಯಪುರ ನಗರದ ಕೈಗಾರಿಕಾ ಪ್ರದೇಶದ ರಾಜಗುರು ಇಂಡಸ್ಟ್ರೀಸ್ ನಲ್ಲಿ ಮೆಕ್ಕೆಜೋಳ ಮೂಟೆ ತುಂಬುವ ಯಂತ್ರ ಕುಸಿದು 7 ಕಾರ್ಮಿಕರು ಮೃತಪಟ್ಟಿದ್ದು, ಮುಂದೆ ಇಂತಹ ಘಟನೆ ನಡೆಯದಂತೆ ಅಗತ್ಯ ಮುನ್ನೆಚ್ಚರಿಕೆ ವಹಿಸಲು ಕಾರ್ಮಿಕ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ್ ಲಾಡ್ ಅವರು ಸೂಚಿಸಿದ್ದಾರೆ.
ಘಟನೆ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆಯಲಾಗಿದ್ದು, ಮುಂದೆ ಇಂತಹ ಘಟನೆ ನಡೆಯದಂತೆ ನೋಡಿಕೊಳ್ಳಲು ಕ್ರಮ ವಹಿಸುವಂತೆ ಹೇಳಿದ್ಧಾರೆ.
ಕಾರ್ಮಿಕರ ಸುರಕ್ಷತೆಗೆ ವಹಿಸಬೇಕಾದ ಮುನ್ನೆಚ್ಚರಿಕಾ ಕ್ರಮಗಳು ಕಟ್ಟುನಿಟ್ಟಾಗಿ ಪಾಲನೆಯಾಗುವಂತೆ ನೋಡಿಕೊಳ್ಳಲು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಅವಘಡದಲ್ಲಿ ಅಸುನೀಗಿದ 7 ಜನ ಕಾರ್ಮಿಕರ ಕುಟುಂಬಗಳಿಗೆ ತಲಾ 7 ಲಕ್ಷ ಪರಿಹಾರ ನೀಡಲಾಗುವುದು. ( ಸರ್ಕಾರದಿಂದ ತಲಾ 2 ಲಕ್ಷ ರೂಗಳು ಹಾಗೂ ಕಾರ್ಖಾನೆ ಮಾಲೀಕರಿಂದ ತಲಾ 5 ಲಕ್ಷ ರೂಗಳು) ಮೃತ ಕಾರ್ಮಿಕರು ಬಿಹಾರ ಮೂಲದವರಾಗಿದ್ದು, ಅವರ ಕುಟುಂಬಸ್ಥರಿಗೆ ಈ ಬಗ್ಗೆ ಮಾಹಿತಿ ನೀಡಲಾಗಿದೆ. ಮೃತ ದೇಹಗಳನ್ನು ವಿಮಾನದ ಮೂಲಕ ಪಾಟ್ನಾಗೆ ಸಾಗಿಸಿ, ಅಲ್ಲಿಂದ ಅವರವರ ಮನೆಗಳಿಗೆ ತಲುಪಿಸಲು ವ್ಯವಸ್ಥೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ.
ಉದಯ ವಾರ್ತೆ ಬೆಳಗಾವಿ