ಉಳ್ಳಾಗಡ್ಡಿಮಠ ಬೆಂಬಲಿಗರಿಂದ ಲಕ್ಷ್ಮಿ ಹೆಬ್ಬಾಳ್ಕರ್ ಗೆ ಭರ್ಜರಿ ಸ್ವಾಗತ:ರಜತ್ ಗೆ ಟಿಕೆಟ್ ನೀಡುವಂತೆ ಮನವಿ

Share to all

ಉಳ್ಳಾಗಡ್ಡಿಮಠ ಬೆಂಬಲಿಗರಿಂದ ಲಕ್ಷ್ಮಿ ಹೆಬ್ಬಾಳ್ಕರ್ ಗೆ ಭರ್ಜರಿ ಸ್ವಾಗತ:ರಜತ್ ಗೆ ಟಿಕೆಟ್ ನೀಡುವಂತೆ ಮನವಿ

ಧಾರವಾಡ: ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಧಾರವಾಡ ಕ್ಷೇತ್ರದ ಉಸ್ತುವಾರಿಆಯಾಗಿರುವ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಇಂದು ಖಾಸಗಿ ಹೋಟೆಲ್ ನಲ್ಲಿ ಕಾಂಗ್ರೆಸ್ ಮುಖಂಡರ ಸಭೆ ಆಯೋಜಿಸಿದ್ದರು.ಈ ಹಿನ್ನಲೆಯಲ್ಲಿ ಆಗಮಿಸುತ್ತಿದ್ದ ವೇಳೆ ಧಾರವಾಡದ ಟೋಲ್ ನಾಕಾ ಬಳಿ ಕಾಂಗ್ರೆಸ್ ಮುಖಂಡ ರಜತ್ ಉಳ್ಳಾಗಡ್ಡಿ ಮಠ ಬೆಂಬಲಿಗರು ಭರ್ಜರಿಯಾಗಿ ಸಚಿವರನ್ನು ವಿಜೃಂಭಣೆಯಿಂದ ಬರಮಾಡಿಕೊಂಡಿದ್ದಾರೆ

50 ಅಡಿ ಎತ್ತರದ ಹೂವಿನ ಬೃಹತ್ ಹಾರವನ್ನು ಕ್ರೇನ್ ಮೂಲಕ ಹಾಕಿ, ಜೆಸಿಬಿ ಮೂಲಕ ಹೂ ಮಳೆ ಸುರಿಸಿ,ಪಟಾಕಿ ಸಿಡಿಸಿ ಸ್ವಾಗತ ಕೋರಿದರು ಅಲ್ಲದೆ ಈ ಬಾರಿಯ ಲೋಕಸಭೆ ಟಿಕೆಟ್ ಕಾಂಗ್ರೆಸ್ ಮುಖಂಡ ರಜತ್ ಉಳ್ಳಾಗಡ್ಡಿ ಮಠ ಅವರಿಗೆ ನೀಡಬೇಕು ಎಂದು ಮನವಿ ಮಾಡಿಕೊಂಡಿದ್ದಾರೆ.ಕಾರ್ಯಕ್ರಮದಲ್ಲಿ ಯೂತ್ ಕಾಂಗ್ರೆಸ್ ಮುಖಂಡರು,ಸ್ಥಳೀಯ ಕಾಂಗ್ರೆಸ್ ನಾಯಕರು ಸೇರಿದಂತೆ ನೂರಾರು ಜನ ಸೇರಿದ್ದರು
ಸ್ವಾಗತದ ನಂತರ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಖಾಸಗಿ ಹೋಟೆಲ್ ಗೆ ಸಭೆ ನಡೆಸಲು ತೆರಳಿದರು.

ಉದಯ ವಾರ್ತೆ ಧಾರವಾಡ.


Share to all

You May Also Like

More From Author