ಹುಬ್ಬಳ್ಳಿ-ಧಾರವಾಡ ಪೋಲೀಸರ ಕಾರ್ಯಾಚರಣೆ.ಅಕ್ರಮ ಗಾಂಜಾ ಮಾರಾಟ.ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ನಾಲ್ವರ ಬಂಧನ.
ಹುಬ್ಬಳ್ಳಿ/ಧಾರವಾಡ:- ಹುಬ್ಬಳ್ಳಿ ಮತ್ತು ಧಾರವಾಡದಲ್ಲಿ ಅಕ್ರಮವಾಗಿ ಗಾಂಜಾ ಮಾರಾಟ ಮಾಡುತ್ತಿದ್ದ ನಾಲ್ವರನ್ನು ಬಂಧಿಸಿ,ಬಂಧಿತರಿಂದ ಗಾಂಜಾ ಮತ್ತು ಹಣ ವಶಪಡಿಸಿಕೊಳ್ಳಲಾಗಿದೆ.
1) ಹುಬ್ಬಳ್ಳಿಯ ಶಹರ ಪೋಲೀಸ ಠಾಣಾ ವ್ಯಾಪ್ತಿಯ ಗೂಡ್ ಶೆಡ್ ರಸ್ತೆಯ ಹತ್ತಿರ ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರನ್ನು ಬಂಧಿಸಿ ಬಂಧಿತರಿಂದ 26500/ರೂ ಮೌಲ್ಯದ ಗಾಂಜಾ ವಶಪಡಿಸಿಕೊಂಡಿದ್ದಾರೆ.ಶಹರ ಠಾಣಾ ಇನ್ಸ್ಪೆಕ್ಟರ್ m.m.ತಹಶಿಲ್ದಾರ ನೇತ್ರತ್ವದಲ್ಲಿ ದಾಳಿ ಮಾಡಿದ್ದಾರೆ.
2)ಧಾರವಾಡದಲ್ಲಿ ಶಹರ ಪೋಲೀಸ ಠಾಣೆಯ ಇನ್ಸ್ಪೆಕ್ಟರ್ ಎನ್.ಸಿ.ಕಾಡದೇವರಮಠ ನೇತ್ರತ್ವದಲ್ಲಿ ಅಕ್ರಮವಾಗಿ ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರನ್ನು ಬಂಧಿಸಿ ಬಂಧಿತರಿಂದ 3500/ ರೂ ಮೌಲ್ಯದ ಗಾಂಜಾ ವಶಪಡಿಸಿಕೊಂಡಿದ್ದಾರೆ.
ಎರಡೂ ಠಾಣೆಯ ಇನ್ಸ್ಪೆಕ್ಟರ್ ಗಳ ಕಾರ್ಯಕ್ಕೆ ಪೋಲೀಸ ಕಮೀಷನರ್ ಶ್ಲಾಘಿಸಿದ್ದಾರೆ.
ಉದಯ ವಾರ್ತೆ ಹುಬ್ಬಳ್ಳಿ.