ಅಶ್ಲೀಲ ವೀಡಿಯೋ ಚಿತ್ರೀಕರಣ: ಆರೋಪಿಯನ್ನು ಕಂಬಕ್ಕೆ ಕಟ್ಟಿ ಥಳಿಸಿದ ಸ್ಥಳೀಯರು.
ಹುಬ್ಬಳ್ಳಿ: ಮಹಿಳೆಯೊಬ್ಬರು ಸ್ನಾನ ಮಾಡುತ್ತಿರುವ ವೀಡಿಯೋ ಚಿತ್ರೀಕರಿಸುತ್ತಿದ್ದ ವ್ಯಕ್ತಿಯೊಬ್ಬನನ್ನು ಕಂಬಕ್ಕೆ ಕಟ್ಟಿ ಥಳಿಸಿದ ಘಟನೆ ಗೋಕುಲ ರಸ್ತೆಯ ಡಾ. ಆರ್.ಎಂ. ಲೋಹಿಯಾ ನಗರದಲ್ಲಿ ನಡೆದಿದೆ.
ಗಣೇಶ ಪೇಟೆಯ ನಿವಾಸಿ ಲಾಡ್ ಸಾಬ್ ಎಂಬಾತ ಲೋಹಿಯಾ ನಗರದ ಕಟ್ಟಡ ಒಂದರ ಬಾರ್ ಬೆಂಡಿಂಗ್ ಕೆಲಸ ಮಾಡುತ್ತಿದ್ದ. ಅಲ್ಲೇ ಪಕ್ಕದ ಮನೆಯ ಬಾಥ್ ರೂಂ ಕಿಟಕಿಯಲ್ಲಿ ಮೊಬೈಲ್ ಇಟ್ಟು, ಮಹಿಳೆ ಸ್ನಾನ ಮಾಡುವ ವೀಡಿಯೋ ತೆಗೆಯುವಾಗ ಸಿಕ್ಕಿ ಬಿದ್ದಿದ್ದಾನೆ.
ಮಹಿಳೆಯ ಚೀರಾಟದಿಂದ ತಕ್ಷಣ ಜಮಾಯಿಸಿದ ಸ್ಥಳಿಯರು ಆರೋಪಿಯನ್ನು ವಿದ್ಯುತ್ ಕಂಬಕ್ಕೆ ಕಟ್ಟಿ ಥಳಿಸಿದ್ದಾರೆ. ಬಳಿಕ ಹಳೇ ಹುಬ್ಬಳ್ಳಿ ಠಾಣೆಯ ಪೊಲೀಸರಿಗೆ ಒಪ್ಪಿಸಿದ್ದಾರೆ. ಪೊಲೀಸರು ವಿಚಾರಣೆ ಕೈಗೊಂಡಿದ್ದಾರೆ.
ಉದಯ ವಾರ್ತೆ ಹುಬ್ಬಳ್ಳಿ