ಬೆಂಡಿಗೇರಿ ಪೋಲೀಸರ ರೇಡ್.ಗಾಂಜಾ ಗಿರಾಕಿ ಆರೆಸ್ಟ್.ಎರಡು ಕೆಜಿಗೂ ಹೆಚ್ಚು ಗಾಂಜಾ ವಶಕ್ಕೆ.
ಹುಬ್ಬಳ್ಳಿ:- ಹುಬ್ಬಳ್ಳಿಯ ಬೆಂಡಿಗೇರಿ ಪೋಲೀಸರು ಕಾರ್ಯಾಚರಣೆ ನಡೆಸಿ ಗಾಂಜಾ ಮಾರಾಟ ಮಾಡುತ್ತಿದ್ದ ವ್ಯಕ್ತಿಯೊಬ್ಬನನ್ನು ಆರೆಸ್ಟ್ ಮಾಡಿದ್ದಾರೆ. ಬಂಧಿತನನ್ನು ವೀರಾಪುರ ಓಣಿಯ ಶಿವಕುಮಾರ ತುಮಕೂರ ಎಂದು ಗುರುತಿಸಲಾಗಿದೆ.
ಗಾಂಜಾ ಗಿರಾಕಿ ನಗರದ ಮಂಟೂರ ರಸ್ತೆಯಲ್ಲಿ ಗಾಂಜಾ ಮಾರುತ್ತಿದ್ದಾನೆ ಎಂದು ಖಚಿತ ಮಾಹಿತಿ ಮೇರೆಗೆ ಪೋಲೀಸರು ದಾಳಿ ಮಾಡಿ ಶಿವಕುಮಾರನನ್ನು ಬಂಧಿಸಿದ್ದಾರೆ.ಬಂಧಿತನಿಂದ ಎರಡು ಕೆಜಿಗೂ ಹೆಚ್ಚು ಗಾಂಜಾ ವಶಪಡಿಸಿಕೊಂಡು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಉದಯ ವಾರ್ತೆ ಹುಬ್ಬಳ್ಳಿ