ನಿಗಮ ಮಂಡಳಿ ನೇಮಕದ ಬೆನ್ನಲ್ಲೇ CM,ಗೃಹ ಸಚಿವರಿಗೆ ಧನ್ಯವಾದ ಸಲ್ಲಿಸಿದ ಶಾಸಕ ಪ್ರಸಾದ್ ಅಬ್ಬಯ್ಯ – ಅವಕಾಶ ನೀಡಿದ ನಾಯಕರಿಗೆ ಧನ್ಯವಾದಗಳನ್ನು ಹೇಳಿದ ಶಾಸಕರು
ಬೆಂಗಳೂರು –
ನಿಗಮ ಮಂಡಳಿ ನೇಮಕದ ಪಟ್ಟಿ ಹೊರ ಬೀಳುತ್ತಿದ್ದಂತೆ ಶಾಸಕ ಪ್ರಸಾದ್ ಅಬ್ಬಯ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ, ಗೃಹ ಸಚಿವ ಪರಮೇಶ್ವರ, ಸಚಿವ ಬೈರತಿ ಸುರೇಶ ಅವರನ್ನು ಭೇಟಿ ಯಾಗಿ ಧನ್ಯವಾದಗಳನ್ನು ಸಲ್ಲಿಸಿದರು.
ಹೌದು ಬೆಂಗಳೂರಿನಲ್ಲಿ ಮೂವರು ನಾಯಕರನ್ನು ಭೇಟಿಯಾದ ಶಾಸಕ ಪ್ರಸಾದ್ ಅಬ್ಬಯ್ಯ ಅವರು ನಾಯಕರಿಗೆ ಧನ್ಯವಾದಗಳನ್ನು ಸಲ್ಲಿಸಿದರು. ನನ್ನನ್ನು ಕರ್ನಾಟಕ ರಾಜ್ಯ ಕೊಳಗೇರಿ ಅಭಿವೃದ್ಧಿ ಮಂಡಳಿಯ ಅಧ್ಯಕ್ಷ ಸ್ಥಾನಕ್ಕೆ ಸಂಪುಟ ದರ್ಜೆ ಸ್ಥಾನಮಾನ ನೀಡಿ ಆದೇಶ ಹೊರಡಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಮತ್ತು ಗೃಹ ಸಚಿವರಾದ ಸನ್ಮಾನ್ಯ ಡಾ.ಜಿ.ಪರಮೇಶ್ವರ ಅವರನ್ನು ಭೇಟಿಮಾಡಿ ಧನ್ಯವಾದ ತಿಳಿಸಿದರು.ಈ ಸಂದರ್ಭದಲ್ಲಿ ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ ಅವರಿಗೂ ಧನ್ಯವಾದಗಳನ್ನು ಹೇಳಿದರು.