ಹುಬ್ಬಳ್ಳಿ: ಬಿಜೆಪಿಯಲ್ಲೇ ಉಳಿದುಕೊಳ್ಳುತ್ತೇನೆ ಎಂದು ಹೇಳಿವ ಮೂಲಕ, ಕಾಂಗ್ರೆಸ್ ಪಕ್ಷ ಸೇರುವ ಮತ್ತು ಲೋಕಸಭೆ ಚುನಾವಣೆಗೆ ಸ್ಪರ್ಧಿಸುವ ಊಹಾ ಪೋಹಗಳಿಗೆ ಮಾಜಿ ಸಚಿವ ಶಂಕರಪಾಟೀಲ ಮುನೇನಕೊಪ್ಪ ತೆರೆ ಎಳಿದಿದ್ದಾರೆ.
ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಾನು ಮೊದಲಿನಿಂದಲೂ ಕಾಂಗ್ರೆಸ್ ವಿರೋಧಿ. ಅದಾಗ್ಯೂ ಕಾಂಗ್ರೆಸ್ ಪಕ್ಷದಲ್ಲಿ ನನ್ನ ಆತ್ಮೀಯರಿದ್ದಾರೆ. ಶೆಟ್ಟರ ಬಿಜೆಪಿ ತೊರೆದ ಬಳಿಕ, ಕಾಂಗ್ರೆಸ್ ಪಕ್ಷಕ್ಕೆ ಬರುವಂತೆ ಹಲವರು ನನಗೂ ಸಲಹೆ ನೀಡಿದ್ದರು. ಆದರೆ, ನಾನು ಬಿಜೆಪಿಯಲ್ಲೇ ಇರುವುದಾಗಿ ಸ್ಪಷ್ಟಪಡಿಸಿದ್ದೇನೆ ಎಂದರು.
ಬಿಜೆಪಿ ನಾಯಕರಾದ ಜೆ.ಪಿ. ನಡ್ಡಾ, ಅಮಿತ್ ಶಾ, ಬಿ.ಎಸ್.ಯಡಿಯೂರಪ್ಪ, ವಿಜಯೇಂದ್ರ ಹಾಗೂ ಪ್ರಹ್ಲಾದ ಜೋಶಿ ಅವರು ಜಗದೀಶ ಶೆಟ್ಟರ ಅವರನ್ನು ಕರೆತಂದಿದ್ದಾರೆ. ಮುಂದಿನ ದಿನಗಳಲ್ಲಿ ಇನ್ನೂ ಹಲವು ನಾಯಕರು ಬಿಜೆಪಿ ಸೇರ್ಪಡೆಯಾಗಲಿದ್ದಾರೆ. ಶೆಟ್ಟರ, ಬಿಜೆಪಿಗೆ ವಾಪಸಾಗಿರುವುದರಿಂದ ಪಕ್ಷಕ್ಕೆ ಇನ್ನಷ್ಟು ಬಲ ಬಂದಂತಾಗಿದೆ ಎಂದರು.