ವಿಶೇಷ ಪೂಜೆಯೊಂದಿಗೆ ಕರ್ನಾಟಕ ಕೊಳಗೇರಿ ಅಭಿವೃದ್ದಿ ಮಂಡಳಿಯ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಪ್ರಸಾದ್ ಅಬ್ಬಯ್ಯ – ಕಚೇರಿ ಪೂಜಾ ಸಮಾರಂಭಕ್ಕೆ ಕುಟುಂಬದವರೊಂದಿಗೆ ಸಾಕ್ಷಿಯಾದ್ರು ಪಕ್ಷದ ಕಾರ್ಯಕರ್ತರು ಅಭಿಮಾನಿಗಳು.
ವಿಶೇಷ ಪೂಜೆಯೊಂದಿಗೆ ಕರ್ನಾಟಕ ಕೊಳಗೇರಿ ಅಭಿವೃದ್ದಿ ಮಂಡಳಿಯ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಪ್ರಸಾದ್ ಅಬ್ಬಯ್ಯ – ಕಚೇರಿ ಪೂಜಾ ಸಮಾರಂಭಕ್ಕೆ ಕುಟುಂಬದವರೊಂದಿಗೆ ಸಾಕ್ಷಿಯಾದ್ರು ಪಕ್ಷದ ಕಾರ್ಯಕರ್ತರು ಅಭಿಮಾನಿಗಳು.
ಬೆಂಗಳೂರು –
ಹುಬ್ಬಳ್ಳಿ ಧಾರವಾಡ ಪೂರ್ವ ವಿಧಾನ ಸಭಾ ಕ್ಷೇತ್ರದ ಪ್ರಸಾದ್ ಅಬ್ಬಯ್ಯ ರನ್ನು ಕರ್ನಾಟಕ ಕೊಳಗೇರಿ ಅಭಿವೃದ್ದಿ ಮಂಡಳಿಯ ಅಧ್ಯಕ್ಷರನ್ನಾಗಿ ರಾಜ್ಯ ಸರ್ಕಾರ ನೇಮಕ ಮಾಡಿದ ಬೆನ್ನಲ್ಲೇ ಬೆಂಗಳೂರಿನಲ್ಲಿ ಮಂಡಳಿಯ ಅಧ್ಯಕ್ಷರಾಗಿ ಶಾಸಕ ಪ್ರಸಾದ್ ಅಬ್ಬಯ್ಯ ಅವರು ಅಧಿಕಾರವನ್ನು ವಹಿಸಿಕೊಂಡರು.
ಹೌದು ಬೆಂಗಳೂರಿನ ಕಚೇರಿಯಲ್ಲಿ ವಿಶೇಷವಾದ ಪೂಜೆಯನ್ನು ಸಲ್ಲಿಸಿದ ಪ್ರಸಾದ್ ಅಬ್ಬಯ್ಯ ಅವರು ಕೊಳಗೇರಿ ಮಂಡಳಿಯ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡರು.ಇದೇ ವೇಳೆ ಕುಟುಂಬದ ಸದಸ್ಯರೊಂದಿಗೆ ಹಲವರು ಈ ಒಂದು ವಿಶೇಷ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದು ನೂತನ ಕೊಳಗೇರಿ ಮಂಡಳಿಯ ಅಧ್ಯಕ್ಷರಿಗೆ ಶುಭಾಶಯ ಕೋರಿ ಶುಭ ಹಾರೈಸಿದರು.
ಇದೇ ವೇಳೆ ಕಾಂಗ್ರೆಸ್ ಪಕ್ಷದ ನಾಯಕರು, ಮುಖಂಡರು,ಕಾರ್ಯಕರ್ತರ ಸಮ್ಮುಖದಲ್ಲಿ ಕರ್ನಾಟಕ ಕೊಳಗೇರಿ ಅಭಿವೃದ್ಧಿ ಮಂಡಳಿಯ ಅಧ್ಯಕ್ಷನಾಗಿ ಅಧಿಕಾರ ಸ್ವೀಕರಿಸದ ಪ್ರಸಾದ್ ಅಬ್ಬಯ್ಯ ನವರಿಗೆ ಅಭಿನಂದನೆಗಳ ಮಹಾಪೂರವೇ ಹರಿದು ಬಂದಿತು.ಈ ಸಂದರ್ಭದಲ್ಲಿ ಕೆಪಿಸಿಸಿ ಕಾರ್ಯಧ್ಯಕ್ಷರಾದ ಸಲೀಂ ಅಹ್ಮದ್,ಶಾಸಕರಾದ ಶ್ರೀನಿವಾಸ ಮಾನೆ,ಡಿಸಿಸಿ ಅಧ್ಯಕ್ಷರಾದ ಅಲ್ತಾಫ್ ಹಳ್ಳೂರ ಸೇರಿದಂತೆ ಸಾವಿರಾರು ಸಂಖ್ಯೆಯಲ್ಲಿ ಪಕ್ಷದ ಕಾರ್ಯಕರ್ತರು ಮುಖಂಡರು ಆಪ್ತರು ಅಭಿಮಾನಿಗಳಿಗೆ ನೂತನ ಅಧ್ಯಕ್ಷರು ಧನ್ಯವಾದಗಳನ್ನು ಅರ್ಪಣೆ ಮಾಡಿದ್ರು.