ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ ಏರ್ ಪೋಟ್೯ ಉದ್ಯೋಗಿ ಸಾವು.
ಬೆಳಗಾವಿ:-ಕಾರೊಂದು ರಸ್ತೆಯ ಬದಿಯಿರುವ ವಿದ್ಯುತ್ ಕಂಬಕ್ಕೆ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಏರಪೋಟ್೯ ಉದ್ಯೋಗಿಯೊಬ್ಬರು ಸಾವನ್ನಪ್ಪಿದ ಘಟನೆ ಬೆಳಗಾವಿ ವಿಮಾನ ನಿಲ್ದಾಣದ ಬಳಿ ಸಂಭವಿಸಿದೆ.
ಮ್ರತರನ್ನು ಹುಬ್ಬಳ್ಳಿ ಮೂಲದ ಕಾಜೋಲ್ ಶಿಯಾನಿ ಎಂದು ಗುರುತಿಸಲಾಗಿದೆ. ಕಾರಿನಲ್ಲಿ ಏರಪೋಟ್೯ನಲ್ಲಿ ಕೆಲಸ ಮಾಡುತ್ತಿದ್ದ ಐದು ಜನ ಕೆಲಸ ಮುಗಿಸಿ ವಾಪಸ್ಸು ಮನೆಗೆ ಹೋಗುವಾಗ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಪಕ್ಕದಲ್ಲಿದ್ದ ವಿದ್ಯುತ್ ಕಂಬಕ್ಕೆ ಡಿಕ್ಕಿಯಾಗಿದೆ.
ಇನ್ನುಳಿದಂತೆ ಕಾರಿನಲ್ಲಿದ್ದ ಉಳಿದ ನಾಲ್ವರ ಸ್ಥಿತಿ ಚಿಂತಾಜನಕವಾಗಿದೆ.ಗಾಯಾಳುಗಳನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.