ಬೆಳಗಾವಿಯಲ್ಲಿ ಭೀಕರ ರಸ್ತೆ ಅಪಘಾತ, ಸ್ಥಳದಲ್ಲೇ ಆರು ಜನ ಸಾವು.ಮದುವೆ ಮುಗಿಸಿ ಮರಳುತ್ತಿದ್ದಾಗ ಘಟನೆ.
ಬೆಳಗಾವಿ:- ಬೆಳಗಾವಿ ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿ ಸ್ಥಳದಲ್ಲಿಯೇ ಆರು ಜನ ಸಾವನ್ನಪ್ಪಿದ ಘಟನೆ ನಡೆದಿದೆ.
ಮದುವೆ ಮುಗಿಸಿ ವಾಪಾಸ್ಸು ಬರುತ್ತಿದ್ದಾಗ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಸ್ವಿಫ್ಟ್ ಕಾರು ಆರು ಜನರ ಜೀವ ತೆಗೆದುಕೊಂಡಿದೆ.
ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ ನಂದಗಡ ಸಮೀಪ ಘಟನೆ ನಡೆದಿದ್ದು. ಮೃತರ ಹೆಸರು ತಿಳಿದು ಬಂದಿಲ್ಲ.
ಮದುವೆ ಮುಗಿಸಿ ವಾಪಸ್ ತೆರಳುವಾಗ ಭೀಕರ ರಸ್ತೆ ಅಪಘಾತವಾಗಿದ್ದು
ಒಂದೇ ಕಾರಿನಲ್ಲಿ ಒಂಬತ್ತು ಜನ ಪ್ರಯಾಣಿಸುತ್ತಿದ್ದರೆಂಬ ಮಾಹಿತಿ ಇದೆ.ಸ್ಥಳಕ್ಕೆ ಬೆಳಗಾವಿ ಎಸ್ಪಿ ಡಾ. ಭೀಮಾಶಂಕರ ಗುಳೇದ್ ಭೇಟಿ, ಪರಿಶೀಲನೆ ನಡೆಸಿದ್ದಾರೆ.