ಈಶ್ವರಪ್ಪ ಹಿರಿಯ ನಾಯಕರು, ಅವರ ಮನವೊಲಿಸುತ್ತೇವೆ. ಬಿಜೆಪಿ ರಾಷ್ಟ್ರೀಯ ನಾಯಕರು, ಸ್ಥಳೀಯ ನಾಯಕರು ಮಾತುಕತೆ ನಡೆಸಲಿದ್ದಾರೆ ಪ್ರಹ್ಲಾದ ಜೋಶಿ.

Share to all

ಈಶ್ವರಪ್ಪ ಹಿರಿಯ ನಾಯಕರು, ಅವರ ಮನವೊಲಿಸುತ್ತೇವೆ.
ಬಿಜೆಪಿ ರಾಷ್ಟ್ರೀಯ ನಾಯಕರು, ಸ್ಥಳೀಯ ನಾಯಕರು ಮಾತುಕತೆ ನಡೆಸಲಿದ್ದಾರೆ ಪ್ರಹ್ಲಾದ ಜೋಶಿ.

ಹುಬ್ಬಳ್ಳಿ: ಲೋಕಸಭೆ ಟಿಕೆಟ್ ಸಿಗದಿದ್ದರಿಂದ ಈಶ್ವರಪ್ಪ ಅವರಿಗೆ ಬೇಸರ ಆಗಿರಬಹುದು ಅವರ ಮನವೊಲಿಸುವ ಪ್ರಯತ್ನ ಮಾಡಲಾಗುವುದು ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹೇಳಿದರು.

ಹುಬ್ಬಳ್ಳಿಯಲ್ಲಿ ಇಂದು ಮಾದ್ಯಮದವರೊಂದಿಗೆ ಮಾತನಾಡಿ, ಈಶ್ವರಪ್ಪ ಅವರ ಜತೆ ಪಕ್ಷದ ರಾಷ್ಟ್ರೀಯ ನಾಯಕರು ಮತ್ತು ಸ್ಥಳೀಯ ನಾಯಕರು ಮಾತುಕತೆ ನಡೆಸಿ ಬೇಸರ ದೂರ ಮಾಡಲಿದ್ದಾರೆ ಎಂದು ತಿಳಿಸಿದರು.

!!ನಾನೂ ಭೇಟಿ ಮಾಡುವೆ.!!! ಈಶ್ವರಪ್ಪ ಅವರು ಅತ್ಯಂತ ಹಿರಿಯ ನಾಯಕರು. ನನಗಿಂತ ಮೊದಲೇ ಬಿಜೆಪಿ ರಾಜ್ಯಾಧ್ಯಕ್ಷರಾಗಿ ಇದ್ದವರು. ಟಿಕೆಟ್ ಸಿಗಲಿಲ್ಲ ಎಂಬ ಕಾರಣಕ್ಕೆ ಅನ್ಯ ಯೋಚನೆ ಮಾಡಲಾರರು ಎಂದು ಜೋಶಿ ಹೇಳಿದರು.

ಈಶ್ವರಪ್ಪ ಅವರನ್ನು ಸದ್ಯದಲ್ಲೇ ನಾನೂ ಭೇಟಿ ಮಾಡಿ ಮಾತನಾಡುವೆ. ಅವರ ಮನವೊಲಿಸುವ ವಿಶ್ವಾಸವಿದೆ. ಪಕ್ಷದ ಹಿರಿಯ ನಾಯಕರಾಗಿ ಅವರು ದುಡುಕಿನ ನಿರ್ಧಾರ ತೆಗೆದುಕೊಳ್ಳುವುದಿಲ್ಲ ಎಂಬ ವಿಶ್ವಾಸ ನನಗಿದೆ ಎಂದು ಸಚಿವ ಜೋಶಿ ತಿಳಿಸಿದರು.

ಟಿಕೇಟ್ ಸಿಗದೇ ಇದ್ದಾಗ ಸಹಜವಾಗಿಯೇ ಎಲ್ಲರಿಗೂ ಬೇಸರ ಆಗುತ್ತದೆ. ಹಾಗಾಗಿ ಪರ-ವಿರೋಧ ಅಭಿಪ್ರಾಯ ಸಾಮಾನ್ಯವಾಗಿರುತ್ತದೆ. ಆದರೆ, ಪಕ್ಷದ ಹೈಕಮಾಂಡ್ ಅದೆಲ್ಲವನ್ನು ಸರಿಪಡಿಸುತ್ತದೆ ಎಂದು ಹೇಳಿದರು.

ಉದಯ ವಾರ್ತೆ ಹುಬ್ಬಳ್ಳಿ


Share to all

You May Also Like

More From Author