ಕುತೂಹಲ ಮೂಡಿಸಿದ ದಿಂಗಾಲೇಶ್ವರ ಸ್ವಾಮಿಗಳ ಪತ್ರಿಕಾಗೋಷ್ಠಿ.ಪಕ್ಷೇತರ ಅಬ್ಯೆರ್ಥಿಯಾಗಿ ಕಣಕ್ಕಿಳಿಯಲಿದ್ದಾರೆ ಎಂಬ ವದಂತಿ.
ಹುಬ್ಬಳ್ಳಿ:- ದಿಂಗಾಲೇಶ್ವರ ಸ್ವಾಮಿಗಳು ಧಾರವಾಡ ಲೋಕಸಭೆ ಚುನಾವಣೆಗೆ ಪಕ್ಷೇತರರಾಗಿ ಕಣಕ್ಕಿಳಿಯಲಿದ್ದಾರೆ ಎಂಬ ವದಂತಿ ಹಿನ್ನೆಲೆಯಲ್ಲಿ ಇಂದು ಹುಬ್ಬಳ್ಳಿಯಲ್ಲಿ ಶಿರಹಟ್ಟಿ ಫಕ್ಕೀರೇಶ್ವರ ಮಠದ ಪೀಠಾಧಿಪತಿ ದಿಂಗಾಲೇಶ್ವರ ಸ್ವಾಮಿಗಳೇ ಪತ್ರಿಕಾಗೋಷ್ಠಿ ಕರೆದಿದ್ದಾರೆ.
ಇಂದು ನಡೆಯಲಿರುವ ಪತ್ರಿಕಾಗೋಷ್ಠಿಯಲ್ಲಿ ದಿಂಗಾಲೇಶ್ವರ ಸ್ವಾಮಿಗಳು ಏನ್ ಹೇಳ್ತಾರೆ ಎಂಬ ಕುತೂಹಲಕ್ಕೆ ಕಾರಣವಾಗಿದೆ.ಕಳೆದ ಎರಡ್ಮೂರು ದಿನಗಳಿಂದ ಚುನಾವಣೆಗೆ ದಿಂಗಾಲೇಶ್ವರ ಸ್ವಾಮಿಗಳು ನಿಲ್ಲತಾರೆ ಎಂಬ ಮಾತುಗಳು ಹರಿದಾಡುತ್ತಿವೆ.
ಧಾರವಾಡ ಲೋಕಸಭೆ ಕ್ಷೇತ್ರದಲ್ಲಿ 5.90 ಲಕ್ಷ ಲಿಂಗಾಯತ ಮತದಾರರಿದ್ದಾರೆ ಲಿಂಗಾಯತ ಮುಖಂಡರು ನನ್ನನ್ನು ಭೇಟಿಯಾಗಿ ಚುನಾವಣೆಗೆ ನಿಲ್ಲುವಂತೆ ಒತ್ತಡ ಹೇರತಿದ್ದಾರೆ ಆದರೆ ದಿಂಗಾಲೇಶ್ವರ ಸ್ವಾಮಿಗಳು ಒಪ್ಪಿಗೆ ಸೂಚಿಸಿಲ್ಲಾ ಎನ್ನಲಾಗಿದೆ ಹೀಗಾಗಿ ಇಂದು ನಡೆಯಲಿರುವ ಪತ್ರಿಕಾಗೋಷ್ಠಿ ಕುತೂಹಲ ಕೆರಳಿಸಿದೆ.