ಧಾರವಾಡ ಲೋಕಸಭೆ: ವಿನೋದ್‌ ಅಸೂಟಿ ಪರ ಪ್ರಚಾರ ಬಿರುಸು. ಪರಿಶಿಷ್ಟ ಜಾತಿ ಸಮುದಾಯದ ಮುಖಂಡರ ಸಭೆ ನಡೆಸಿದ ಸಚಿವ ಲಾಡ್‌.

Share to all

ಧಾರವಾಡ ಲೋಕಸಭೆ: ವಿನೋದ್‌ ಅಸೂಟಿ ಪರ ಪ್ರಚಾರ ಬಿರುಸು.
ಪರಿಶಿಷ್ಟ ಜಾತಿ ಸಮುದಾಯದ ಮುಖಂಡರ ಸಭೆ ನಡೆಸಿದ ಸಚಿವ ಲಾಡ್‌.

ಧಾರವಾಡ:- ಧಾರವಾಡ ಲೋಕಸಭಾ ಚುನಾವಣಾ ಪ್ರಚಾರ ದಿನೇ ದಿನೇ ರಂಗೇರುತ್ತಿದೆ. ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ವಿನೋದ್‌ ಅಸೂಟಿ ಅವರೂ ಬಿರುಸಿನ ಪ್ರಚಾರ ಕೈಗೊಂಡಿದ್ದಾರೆ. ಅವರ ಪರವಾಗಿ ಕಾರ್ಮಿಕ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ್‌ ಲಾಡ್‌ ಅವರು, ಪ್ರಚಾರದಲ್ಲಿ ಭಾಗಿಯಾಗಿದ್ದಾರೆ. ಸರಣಿ ಸಭೆ, ಮುಖಂಡರ ಜೊತೆ ಚರ್ಚೆ ನಡೆಸುತ್ತಿದ್ದಾರೆ.

ಧಾರವಾಡದಲ್ಲಿ ಪರಿಶಿಷ್ಟ ಜಾತಿ ಸಮುದಾಯದ ಮುಖಂಡರ ಸಭೆ ನಡೆಸಿದ ಸಚಿವರು, ಅಸೂಟಿ ಅವರ ಗೆಲುವಿಗೆ ಬೆಂಬಲ ನೀಡಬೇಕು ಎಂದು ಮನವಿ ಮಾಡಿದರು. ಈ ಬಾರಿ ಹಿಂದಿನ ದಾಖಲೆ ಮುರಿದು ಕಾಂಗ್ರೆಸ್‌ ಜಯಭೇರಿ ಸಾಧಿಸಬೇಕು. ಇದಕ್ಕೆ ನಿಮ್ಮೆಲ್ಲರ ಸಹಕಾರ ಬೇಕು ಎಂದು ಕೋರಿದರು.

ಸಚಿವರ ಮನವಿಗೆ ಪ್ರತಿಕ್ರಿಯಿಸಿದ ಮುಖಂಡರು, ಎಸ್‌ಟಿ ಸಮುದಾಯದ ಕಲ್ಯಾಣಕ್ಕೆ ಸಿದ್ದರಾಮಯ್ಯ ಅವರ ನೇತೃತ್ವದ ಸರ್ಕಾರ ಹಲವಾರು ಕಲ್ಯಾಣ ಯೋಜನೆಗಳನ್ನು ನೀಡಿದೆ. ಕೇಂದ್ರದಲ್ಲೂ ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ಬರಬೇಕು. ಧಾರವಾಡದಲ್ಲಿ ಕಾಂಗ್ರೆಸ್‌ ವಿಜಯಶಾಲಿಯಾಗಬೇಕು. ಅದಕ್ಕೆ ಬೆಂಬಲಿಸುವುದಾಗಿ ಹೇಳಿದರು.

ಉದಯ ವಾರ್ತೆ
ಧಾರವಾಡ.


Share to all

You May Also Like

More From Author