ಸಾಲಬಾಧೆ ತಾಳಲಾರದೇ ಒಂದೇ ಕುಟುಂಬದ ಮೂವರು ಸಾವು – ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡ ಕುಟುಂಬದವರು
ಸಾಲಭಾದೆ ತಾಳಲಾರದೇ ಒಂದೇ ಕುಟುಂಬದ ಮೂವರ ಆತ್ಮಹತ್ಯೆ ಮಾಡಿಕೊಂಡ ಘಟನೆ ತುಮಕೂರಿನ ಪಂಡಿತನಹಳ್ಳಿ ರೈಲ್ವೆ ಹಳಿ ಬಳಿ ನಡೆದಿದೆ.ಸಿದ್ದಲಿಂಗಯ್ಯ, ಪತ್ನಿ ಸುನಂದಮ್ಮ, ಮಗಳು ಗೀತಾ ಆತ್ಮಹತ್ಯೆ ಮಾಡಿಕೊಂಡವರಾಗಿದ್ದಾರೆ.ಕೆಇಬಿಯಲ್ಲಿ ಕೆಲಸ ನಿರ್ವಹಿಸಿ ನಿವೃತ್ತರಾಗಿದ್ದ ಸಿದ್ದಲಿಂಗಯ್ಯ ಅವರು.ಸದ್ಯ ಕೆಸಿ ಜನರಲ್ ಆಸ್ಪತ್ರೆ ಬಳಿ ಟೀ ಅಂಗಡಿ ಇಟ್ಟುಕೊಂಡಿದ್ದ ಸಿದ್ದಲಿಂಗಯ್ಯ. ಸಾಕಷ್ಟು ಸಾಲವಿದ್ದ ಹಿನ್ನೆಲೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆಯನ್ನು ಪೊಲೀಸರು ವ್ಯಕ್ತಪಡಿಸಿದ್ದಾರೆ.ಇನ್ನೂ ಮೂವರ ಶವ ರೈಲಿಗೆ ಸಿಲುಕಿ ಚಲ್ಲಾಪಿಲ್ಲಿಯಾಗಿದ್ದು ಮೃತ ದೇಹದ ಸಣ್ಣ ಪುಟ್ಟ ಬಿಡಿಭಾಗಗಳನ್ನು ಕಲೆಕ್ಟ್ ಮಾಡಿರುವ ಪೊಲೀಸರು ತುಮಕೂರು ಶವಗಾರಕ್ಕೆ ರವಾನೆ ಮಾಡಲಾಗಿದೆ ಇನ್ನೂ ಈ ಕುರಿತಂತೆ ಕ್ಯಾತಸಂದ್ರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು ಮುಂದಿನ ಕ್ರಮವನ್ನು ಕೈಗೊಂಡಿದ್ದಾರೆ.
ಉದಯ ವಾರ್ತೆ ತುಮಕೂರ…..