ಬಿಎಸ್ ವೈ, ಪ್ರಭಾಕರ್ ಕೋರೆ ನೇತೃತ್ವದಲ್ಲಿ 15ಕ್ಕೆ ಪ್ರಹ್ಲಾದ ಜೋಶಿ ನಾಮಪತ್ರ ಸಲ್ಲಿಕೆ.

Share to all

ಬಿಎಸ್ ವೈ, ಪ್ರಭಾಕರ್ ಕೋರೆ ನೇತೃತ್ವದಲ್ಲಿ 15ಕ್ಕೆ ಪ್ರಹ್ಲಾದ ಜೋಶಿ ನಾಮಪತ್ರ ಸಲ್ಲಿಕೆ.

ಹುಬ್ಬಳ್ಳಿ: ಧಾರವಾಡ ಲೋಕಸಭೆ ಕ್ಷೇತ್ರಕ್ಕೆ 5ನೇ ಬಾರಿ ಸ್ಪರ್ಧೆ ಬಯಸಿ ಇದೇ 15ರಂದು ಬೃಹತ್ ಮೆರವಣಿಗೆ ಮೂಲಕ ತೆರಳಿ ನಾಮಪತ್ರ ಸಲ್ಲಿಸುತ್ತೇನೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ತಿಳಿಸಿದರು.

 

ಹುಬ್ಬಳ್ಳಿಯಲ್ಲಿ ಇಂದು ಸಂಜೆ ಮಾದ್ಯಮದವರೊಂದಿಗೆ ಮಾತನಾಡಿ, ಹುಬ್ಬಳ್ಳಿ ಶಿವಾಜಿ ಸರ್ಕಲ್ ನಿಂದ ಅಸಂಖ್ಯಾತ ಕಾರ್ಯಕರ್ತರೊಂದಿಗೆ ಅದ್ದೂರಿ ಮೆರವಣಿಗೆಯಲ್ಲಿ ತೆರಳಿ ಉಮೇದುವಾರಿಕೆ ಸಲ್ಲಿಸುವೆ ಎಂದು ಹೇಳಿದರು.

ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಮತ್ತು ರಾಜ್ಯಸಭೆ ಮಾಜಿ ಸದಸ್ಯ ಪ್ರಭಾಕರ್ ಕೋರೆ ಅವರ ನೇತೃತ್ವದಲ್ಲಿ ನಾಮಪತ್ರ ಸಲ್ಲಿಕೆಗೆ ಸಿದ್ಧತೆ ನಡೆದಿದೆ. ಶಾಸಕ ಅರವಿಂದ ಬೆಲ್ಲದ್, ಮಹೇಶ ತೆಂಗಿನಕಾಯಿ, ಶಂಕರಣ್ಣ ಮುನವಳ್ಳಿ ಮುಂತಾದ ಪ್ರಮುಖರು ಅಂದು ಸಾಥ್ ನೀಡಲಿದ್ದಾರೆ ಎಂದು ತಿಳಿಸಿದರು.

ಅಂದು ಬೆಳಗ್ಗೆ 10 ಗಂಟೆಗೆ ಮೆರವಣಿಗೆ ನಡೆಯಲಿದ್ದು, ಬಿಜೆಪಿ ಮುಖಂಡರು, ಕಾರ್ಯಕರ್ತರು, ಅಭಿಮಾನಿಗಳು ಹಾಗೂ ಸಾವಿರಾರು ಸಂಖ್ಯೆಯಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಸಚಿವ ಜೋಶಿ ತಿಳಿಸಿದರು.

ಉದಯ ವಾರ್ತೆ
ಹುಬ್ಬಳ್ಳಿ


Share to all

You May Also Like

More From Author