ಹುಬ್ಬಳ್ಳಿ ಭೀಕರ ರಸ್ತೆ ಅಪಘಾತ.ಮೂವರು ಸ್ಥಳದಲ್ಲಿಯೇ ಸಾವು.
ಹುಬ್ಬಳ್ಳಿ ತಾಲೂಕಿನ ಅಂಚಟಗೇರಿ ಬಳಿ ಭೀಕರ ಅಪಘಾತವಾಗಿದ್ದು
ಮೂವರು ಸಾವನ್ನಪ್ಪಿದ ಘಟನೆ ಹುಬ್ಬಳ್ಳಿ ಹೊರವಲಯದಲ್ಲಿ ನಡೆದಿದೆ.
ಹುಬ್ಬಳ್ಳಿ ತಾಲೂಕಿನ ಅಂಚಟಗೇರಿ ಬಳಿ ಬೆಳಗಿನ ಜಾವ ನಡೆದ ಘಟನೆ ನಡೆದಿದ್ದು ಓರ್ವ ಗಂಭೀರವಾಗಿ ಗಾಯಗೊಂಡಿದ್ದಾನೆ.
ಘಟನೆಯಲ್ಲಿ ಪಾರ್ಚೂನರ್ ಕಾರನಲ್ಲಿದ್ದ ಮೂವರು ಸಾವನ್ನಪ್ಪಿದ್ದಾರೆ.
ಓರ್ವನಿಗೆ ಗಂಭೀರ ಗಾಯವಾಗಿದ್ದು, ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.ಮೃತರ ಆಂಧ್ರದ ಕರ್ನೂಲ ಜಿಲ್ಲೆಯ ನಿವಾಸಿಗಳು ಎಂದು ಗುರುತಿಸಲಾಗಿದೆ.
ಮೃತರ ಹೆಸರು ತಿಳಿದು ಬಂದಿಲ್ಲ.
ಕಾರ್ ನಲ್ಲಿ ಮದ್ಯದ ಬಾಟಲ್ ಗಳು ಪತ್ತೆಯಾಗಿದ್ದು
ಕುಡಿದ ಮತ್ತಿನಲ್ಲಿ ಅಪಘಾತವಾಗಿರೋ ಶಂಕೆ ವ್ಯಕ್ತವಾಗಿದೆ.ಸ್ಥಳಕ್ಕೆ ಹುಬ್ಬಳ್ಳಿ ಗ್ರಾಮೀಣ ಪೊಲೀಸರು ಭೇಟಿ ಪರಿಶೀಲನೆ ನಡೆಸಿದ್ದಾರೆ.