ಪಂಚಮಸಾಲಿ ಪೀಠಾಧ್ಯಕ್ಷ ಜಯಮೃತ್ಯುಂಜಯ ಶ್ರೀ ಆಶೀರ್ವಾದ ಪಡೆದ ಸಚಿವ ಪ್ರಹ್ಲಾದ ಜೋಶಿ
ಹುಬ್ಬಳ್ಳಿ: ಕೇಂದ್ರ ಸಂಸದೀಯ ಸಚಿವ, ಧಾರವಾಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಪ್ರಹ್ಲಾದ ಜೋಶಿ ಅವರು ಇಂದು ಕೂಡಲ ಸಂಗಮದ ಪಂಚಮಸಾಲಿ ಪೀಠಾಧ್ಯಕ್ಷ ಶ್ರೀ ಜಯಮೃತ್ಯುಂಜಯ ಸ್ವಾಮೀಜಿ ಅವರನ್ನು ಭೇಟಿ ಮಾಡಿ ಆಶೀರ್ವಾದ ಪಡೆದರು.
ಇಂದು ಬೆಳಗ್ಗೆ ಲಿಂಗಾಯತ ಪಂಚಮಸಾಲಿ ಸಮಾಜದ ಪೀಠಾಧ್ಯಕ್ಷರಾದ ಜಗದ್ಗುರು ಶ್ರೀ ಜಯ ಮೃತ್ಯುಂಜಯ ಸ್ವಾಮೀಜಿ ಅವರೊಂದಿಗೆ ಸಚಿವರು ಪ್ರಸಕ್ತ ವಿದ್ಯಮಾನಗಳ ಬಗ್ಗೆ ಚರ್ಚೆ ನಡೆಸಿದರು. ಈ ವೇಳೆ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹಾಗೂ ಪ್ರಮುಖರು ಉಪಸ್ಥಿತರಿದ್ದರು.