ನೇಹಾ ಹಿರೇಮಠ ಹತ್ಯೆ ಪ್ರಕರಣ.ಪೋಲೀಸ ಠಾಣೆಗೆ ಮುತ್ತಿಗೆ ಹಾಕಿದ ವಿಶ್ವ ಹಿಂದೂ ಪರಿಷತ್ ಹಾಗೂ ಭಜರಂಗ ದಳದ ಕಾರ್ಯಕರ್ತರು.
ಹುಬ್ಬಳ್ಳಿ:- ಹುಬ್ಬಳ್ಳಿಯ ಬಿವಿಬಿ ಕ್ಯಾಂಪಸ್ ನಲ್ಲಿ ನಡೆದ ನೇಹಾ ಹಿರೇಮಠ ಹತ್ಯೆ ಖಂಡಿಸಿ ಹುಬ್ಬಳ್ಳಿಯ ವಿದ್ಯಾನಗರ ಪೋಲೀಸ ಠಾಣೆಗೆ ವಿಶ್ವ ಹಿಂದೂ ಪರಿಷತ್ ಹಾಗೂ ಭಜರಂಗದಳ ಕಾರ್ಯಕರ್ತರು ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದ್ದಾರೆ.
ಹಾಡು ಹಗಲೇ ಒಂದು ಕಾಲೇಜ ಕ್ಯಾಂಪಸ್ ನಲ್ಲಿ ಕೊಲೆ ಮಾಡಿದ ಯುವಕನನ್ನು ಗಲ್ಲಿಗೇರಿಸಬೇಕು.ಹಾಗೂ ಹುಬ್ಬಳ್ಳಿ-ಧಾರವಾಡದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಇಂದು ಸಾಯಂಕಾಲ ಬಿವಿಬಿ ಕ್ಯಾಂಪಸನಲ್ಲಿ ನೇಹಾ ಹಿರೇಮಠ ಎಂಬ ಯುವತಿಯನ್ನು ಫಯಾಜ್ ಎಂಬ ಯುವಕ ಚಾಕುವಿನಿಂದ ಇರಿದು ಭರ್ಭರವಾಗಿ ಕೊಲೆ ಮಾಡಿದ್ದನು.