ಹಗರಿಬೊಮ್ಮನಹಳ್ಳಿಯಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಇ. ತುಕಾರಾಂ ಚುನಾವಣಾ ಪ್ರಚಾರ.ದೇಶದಲ್ಲಿ ಕ್ರಾಂತಿ ಮಾಡಿದ್ದು ಕಾಂಗ್ರೆಸ್‌ ಪಕ್ಷ

Share to all

ಹಗರಿಬೊಮ್ಮನಹಳ್ಳಿಯಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಇ. ತುಕಾರಾಂ ಚುನಾವಣಾ ಪ್ರಚಾರ.ದೇಶದಲ್ಲಿ ಕ್ರಾಂತಿ ಮಾಡಿದ್ದು ಕಾಂಗ್ರೆಸ್‌ ಪಕ್ಷ

ಹಗರಿಬೊಮ್ಮನಹಳ್ಳಿ:-ಈ ಬಾರಿಯ ಲೋಕಸಭಾ ಚುನಾವಣೆ ದೇಶದ ಭವಿಷ್ಯ ನಿರ್ಧರಿಸುವ ಚುನಾವಣೆ. ಕಳೆದ ವರ್ಷ ನಡೆದ ವಿಧಾನ ಸಭಾ ಚುನಾವಣೆ ರಾಜ್ಯದ ಭವಿಷ್ಯ ನಿರ್ಧರಿಸಿದ್ದ ಚುನಾವಣೆ ಆಗಿತ್ತು. ಇಂದಿರಾ ಗಾಂಧಿ ಅವರು ಅಧಿಕಾರದಲ್ಲಿದ್ದಾಗ ಜಾರಿಗೆ ಮಾಡಿದ ಊಳುವವನೆ ಭೂಮಿಯ ಒಡೆಯ ಕಾನೂನು ಜಾರಿ ಮಾಡಿ ಕೋಟ್ಯಂತರ ಜನರಿಗೆ ಭೂಮಿಯ ಹಕ್ಕು ನೀಡಿದರು. ಇದೊಂದೆ ಅಲ್ಲ ಇಂತಹ ನೂರಾರು ಕಾನೂನುಗಳನ್ನು ಬಡವರಿಗಾಗಿ ಜಾರಿ ಮಾಡಿದರು ಎಂದು ಬಳ್ಳಾರಿ ಲೋಕಸಭಾ ಚುನಾವಣೆಯ ಕಾಂಗ್ರೆಸ್‌ ಅಭ್ಯರ್ಥಿ ಇ ತುಕಾರಾಂ ಅವರು ಹೇಳಿದರು.

ಹಗರಿಬೊಮ್ಮನಹಳ್ಳಿಯಲ್ಲಿ ಹಮ್ಮಿಕೊಂಡಿದ್ದ ಚುನಾವಣಾ ಪ್ರಚಾರ ಸಭೆಯಲ್ಲಿ ಅವರು ಮಾತನಾಡಿದರು.

ಪಿ ವಿ ನರಸಿಂಹರಾವ್‌ ಹಾಗೂ ಡಾ. ಮನಮೋಹನ್‌ ಸಿಂಗ್‌ ಅವರು ಜಾರಿ ಮಾಡಿದ ಕಾನೂನುಗಳಿಂದ ದೇಶ ಅಭಿವೃದ್ಧಿಯತ್ತ ಸಾಗಿತ್ತು. ಅವರ ಆರ್ಥಿಕ ಸುಧಾರಣೆಗಳು ಕ್ರಾಂತಿ ಮಾಡಿದವು. ಉದ್ಯೋಗ ಸೃಷ್ಟಿ ಮಾಡಿದವು. ಕಲ್ಯಾಣ ಕಾರ್ಯಕ್ರಮಗಳು ಜಾರಿ ಮಾಡಿದವು. ಇಂತಹ ಕಾಂಗ್ರೆಸ್‌ ಮತ್ತೆ ಅಧಿಕಾರಕ್ಕೆ ಬರಬೇಕು ಎಂದರು.

ದೇಶದ ಜ್ವಲಂತ ಸಮಸ್ಯೆಗಳ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರು ಗಮನ ಹರಿಸುತ್ತಲೇ ಇಲ್ಲ. ಉದ್ಯೋಗಾವಕಾಶಗಳನ್ನು ಸೃಷ್ಟಿಸಲಿಲ್ಲ. ಆದರೆ ಕಾಂಗ್ರೆಸ್‌ ನೀಡಿದ ಭರವಸೆಗಳನ್ನು ಈಡೇರಿಸುತ್ತಾ ಬಂದಿದೆ ಎಂದು ವಿವರಿಸಿದರು.

ಪ್ರಚಾರ ಸಭೆಯಲ್ಲಿ ಕೆಎಂಎಫ್‌ ಅಧ್ಯಕ್ಷರಾದ ಭೀಮನಾಯ್ಕ್ , ರಫೀಕ್ ಮಾಜಿ ಬಳ್ಳಾರಿ ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷರು, ಶ್ರೀ ಶಿವಯೋಗಿ ಬಳ್ಳಾರಿ ಗ್ರಾಮೀಣ ಕಾಂಗ್ರೆಸ್ ಪಕ್ಷದ ಸಮಿತಿಯ ಅಧ್ಯಕ್ಷರು, ಶ್ರೀ ಗೋಣಿಬಸಪ್ಪ ಹಗರಿಬೊಮ್ಮನಹಳ್ಳಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು, ಹಗರಿಬೊಮ್ಮನಹಳ್ಳಿಯ ಅಧ್ಯಕ್ಷರು ಉಪಾಧ್ಯಕ್ಷರು ಗ್ರಾಮ ಪಂಚಾಯತಿ ಸದಸ್ಯರು ಹಾಗೂ ಕಾಂಗ್ರೆಸ್ ಮುಖಂಡರು ಮತ್ತು ಸಾರ್ವಜನಿಕರ ಹಾಗೂ ಉಪಸ್ಥಿತರಿದ್ದರು

*ಕಾಂಗ್ರೆಸ್‌ ಸೇರ್ಪಡೆ*
ಶ್ರೀ ತಾಯಮ್ಮ ಶಕ್ತಿ ಸಂಘದ ಅಧ್ಯಕ್ಷೆ ಶ್ರೀಮತಿ ಕವಿತಾ ಈಶ್ವರ ಸಿಂಗ್ ರವರು ಕಾಂಗ್ರೆಸ್ ಪಕ್ಷದ ತತ್ವ ಸಿದ್ಧಾಂತವನ್ನು ಒಪ್ಪಿ, ಕಾಂಗ್ರೆಸ್ ಪಕ್ಷವನ್ನು ಸೇರಿಕೊಂಡರು. ಜೊತೆಯಲ್ಲಿ ಅವರ ಅಪಾರ ಬೆಂಬಲಿಗರು ಈ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರಿದರು.

ಈ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷದ ಮುಖಂಡರಾದ ಗುಜ್ಜಲ ನಾಗರಾಜ್ , ಹೂಡಾ ಮಾಜಿ ಸದಸ್ಯ ತಾರಿಹಳ್ಳಿ ವೇಂಕಟೇಶ, ನಾಣೀಕೆರಿ ರಾಘವೇಂದ್ರ ಶ್ರೀಮತಿ ಲಲೀತಾ ಪರಗಂಟಿ, ಕವಿತಾ ಈಶ್ವರ ಸಿಂಗ್ ರವರ ಪುತ್ರ ಕಿಶನ್ ಸಿಂಗ್ ಮತ್ತಿತರರು ಇದ್ದರು.

ಉದಯ ವಾರ್ತೆ
ಬಳ್ಳಾರಿ


Share to all

You May Also Like

More From Author