ನೇಹಾ ಹಿರೇಮಠ ಹತ್ಯೆ ಇಂದು ಹುಬ್ಬಳ್ಳಿ-ಧಾರವಾಡ ಬಂದ್ ಗೆ ಕರೆ ನೀಡಿದ ಮುಸ್ಲಿಂ ಸಮಾಜ. ಅಂಜುಮನ್ ಇಸ್ಲಾಂ ಸಂಸ್ಥೆ ಕೂಡಾ ಬಂದ್ ಗೆ ಬೆಂಬಲ.
ಹುಬ್ಬಳ್ಳಿ ; ಹುಬ್ಬಳ್ಳಿಯ ಪ್ರತಿಷ್ಠಿತ ಬಿವ್ಹಿಬಿ ಕಾಲೇಜಿನ ಆವರಣದಲ್ಲಿ ಭೀಕರವಾಗಿ ಹತ್ಯೆಯಾದ ಕುಮಾರಿ ನೇಹಾ ಹಿರೇಮಠ ಸಾವಿಗೆ ನ್ಯಾಯ ಕೊಡಿಸಲು ಧಾರವಾಡದ ಅಂಜುಮನ್ ಇಸ್ಲಾಂ ಸಂಸ್ಥೆ ಹುಬ್ಬಳ್ಳಿ-ಧಾರವಾಡ ಬಂದ್ ಗೆ ಕರೆ ನೀಡಿದೆ.
ಎಲ್ಲ ಅಂಗಡಿ ಮುಂಗಟ್ಟುಗಳ ಮೇಲೆ ಬಂದ್ ಕರಪತ್ರ ಅಂಟಿಸಿ ಸಹೋದರಿ ನೇಹಾ ಸಾವಿಗೆ ನ್ಯಾಯ ಕೊಡಿಸಲು ಕೈ ಜೋಡಿಸುವಂತೆ ಮನವಿ ಮಾಡಲಾಗುತ್ತಿದೆ.
ನೇಹಾ ಕೊಲೆಗೆ ರಾಜ್ಯದಾದ್ಯಂತ ತೀವ್ರ ಖಂಡನೆ ವ್ಯಕ್ತವಾಗುತ್ತಿದ್ದು ಈಗ ಮುಸ್ಲೀಂ ಸಮುದಾಯ ಕೂಡ ನೇಹಾ ಕುಟುಂಬಕ್ಕೆ ನ್ಯಾಯ ಕೊಡಿಸಲು ಜೊತೆಗೂಡಿದೆ.